ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರಿನಲ್ಲಿ ಶೀಘ್ರದಲ್ಲೇ ವೈದ್ಯಕೀಯ ಮಹಾವಿದ್ಯಾಲಯ ಶುರು : ಸಚಿವ ಸಿ.ಟಿ.ರವಿ ಭರವಸೆ - ಚಿಕ್ಕಮಗಳೂರು ಸುದ್ದಿ

170 ಕೋಟಿ ವೆಚ್ಚದಲ್ಲಿ ಜಿಲ್ಲೆಯ ವೈದ್ಯಕೀಯ ಮಹಾವಿದ್ಯಾಲಯ ನಿರ್ಮಾಣವಾಗುತ್ತಿದ್ದು, ಅಗತ್ಯವಿರುವ ಕೊಠಡಿಗಳು, ವೈದ್ಯಕೀಯ ಉಪಕರಣಗಳು, ಆಸ್ಪತ್ರೆ, ವೈದ್ಯರು ಹಾಗೂ ಸಿಬ್ಬಂದಿಗಳಿಗೆ ವಸತಿ ಗೃಹಗಳ ನಿರ್ಮಾಣವಾಗಲಿದೆ ಎಂದು ಸಚಿವ ಸಿಟಿ ರವಿ ಹೇಳಿದ್ದಾರೆ.

C.T Ravi
ಸಚಿವ ಸಿ.ಟಿ.ರವಿ

By

Published : Jan 29, 2020, 9:55 PM IST

ಚಿಕ್ಕಮಗಳೂರು:ಜಿಲ್ಲೆಯಲ್ಲಿ ಸುಸಜ್ಜಿತವಾದ ವೈದ್ಯಕೀಯ ಮಹಾವಿದ್ಯಾಲಯವನ್ನು ಅತಿ ಶೀಘ್ರದಲ್ಲಿಯೇ ನಗರದ ಹೊರವಲಯದ ಕದ್ರಿ ಮಿದ್ರಿಯಲ್ಲಿ ಪ್ರಾರಂಭಿಸಲಾಗುವುದು ಎಂದು ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ ರವಿ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಗೆ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಸರ್ಕಾರದಿಂದ ಅನುಮೋದನೆ ದೊರಕಿದ್ದು, ಅದಕ್ಕೆ ಅಗತ್ಯವಿರುವ ಜಾಗವನ್ನು ನಗರದ ಹೊರ ವಲಯದಲ್ಲಿರುವ ಕದ್ರಿಮಿದ್ರಿಯಲ್ಲಿ ಮೀಸಲಿರಿಸಲಾಗಿದ್ದು, ಕಟ್ಟಡಗಳ ನಿರ್ಮಾಣಕ್ಕೆ ಅಗತ್ಯವಿರುವ ಸಿದ್ದತೆಯನ್ನು ನೀಲಿ ನಕಾಶೆ ಅನ್ವಯ ಮಾಡಬೇಕು ಎಂದರು.

ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವ ಸಿ.ಟಿ ರವಿ

170 ಕೋಟಿ ವೆಚ್ಚದಲ್ಲಿ ಜಿಲ್ಲೆಯ ವೈದ್ಯಕೀಯ ಮಹಾವಿದ್ಯಾಲಯ ನಿರ್ಮಾಣವಾಗುತ್ತಿದ್ದು, ಅಗತ್ಯವಿರುವ ಕೊಠಡಿಗಳು, ವೈದ್ಯಕೀಯ ಉಪಕರಣಗಳು, ಆಸ್ಪತ್ರೆ, ವೈದ್ಯರು ಹಾಗೂ ಸಿಬ್ಬಂದಿಗೆ ವಸತಿ ಗೃಹಗಳ ನಿರ್ಮಾಣ ಮತ್ತು ಪೀಠೋಪಕರಣಗಳನ್ನು ಸಮರ್ಪಕವಾಗಿ ಪೂರೈಸುವುದರ ಜೊತೆಗೆ ರೋಗಿಗಳು ಹಾಗೂ ಸಿಬ್ಬಂದಿಗೆ ಅನುಕೂಲವಾಗುವಂತೆ ಆಸ್ಪತ್ರೆಯ ಆವರಣದಲ್ಲಿ ಕ್ಯಾಂಟೀನ್ ನಿರ್ಮಿಸುವಂತೆ ಇದೇ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಜ್ಞ ವೈದ್ಯರುಗಳ ವಸತಿ ಗೃಹಗಳ ನಿರ್ಮಾಣಕ್ಕಾಗಿ ನಿಗದಿಪಡಿಸಿದ ಜಾಗದಲ್ಲಿ 56 ವಸತಿ ಗೃಹಗಳನ್ನು ನಿರ್ಮಿಸಿ, ಹೆಚ್ಚುವರಿ ವಸತಿ ಗೃಹಗಳ ನಿರ್ಮಾಣಕ್ಕಾಗಿ ಪ್ರತ್ಯೇಕ ಜಾಗವನ್ನು ಗುರುತಿಸಲಾಗುತ್ತಿದ್ದು, ನಿರಪೇಕ್ಷಣಾ ಪತ್ರವನ್ನು ಪಡೆದು ಆಸ್ಪತ್ರೆಯ ಎಲ್ಲಾ ಕಟ್ಟಡಗಳ ನಿರ್ಮಾಣಕ್ಕೆ ಹಾಗೂ ವೈದ್ಯರ ಹೆಚ್ಚುವರಿ ಕಟ್ಟಡ ನಿರ್ಮಾಣಕ್ಕಾಗಿ ಸರ್ವೇ ನಂ.116 ರಲ್ಲಿ 2 ಎಕರೆ ನೀಡಲು ಅಧಿಕಾರಿಗಳಿಗೆ ತಿಳಿಸಿದರು.

ನೈಸರ್ಗಿಕವಾಗಿ ಬೆಳೆದಿರುವ ಕಾಡುಗಳನ್ನು ನಾಶ ಮಾಡುವುದು ಅಪರಾಧವಾಗಿದ್ದು, ಅಂತರ್ಜಲ ಮಟ್ಟವನ್ನು ಹೆಚ್ಚಿಸುವಂತಹ ಗಿಡಮರಗಳನ್ನು ಬೆಳೆಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸಲಹೆ ನೀಡಿದರು.

ABOUT THE AUTHOR

...view details