ಚಿಕ್ಕಮಗಳೂರು :ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕಳ್ಳರು ದೋಚಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದ ಹೊರವಲಯದ ತೇಗೂರು ಗ್ರಾಮದಲ್ಲಿರುವ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ.
ಶ್ರೀಆಂಜನೇಯ ಸ್ವಾಮಿ ದೇವಸ್ಥಾನದ ಕಿಟಕಿ ಒಡೆದು ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಕಳ್ಳರು ತಮ್ಮ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಬಾರದೆಂದು ಸಂಪರ್ಕ ಕಟ್ ಮಾಡಿ ಕಳ್ಳತನ ಮಾಡಿದ್ದಾರೆ.