ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರು: ಗ್ರಾಮ ಪಂಚಾಯತ್ ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಜನ - Chikkamagalur

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊರನಾಡಿನಿಂದ ಶೃಂಗೇರಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಅಸಮರ್ಪಕ ಕಾಮಗಾರಿ ವಿರೋಧಿಸಿ ಹಾಗೂ ರಸ್ತೆ ಅಗಲೀಕರಣಕ್ಕೆ ಒತ್ತಾಯಿಸಿ ಜಿಲ್ಲೆಯ ವಿವಿಧ ಗ್ರಾಮಸ್ಥರು ಗ್ರಾಮ ಪಂಚಾಯತ್ ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.

Chikkamagalur
ಚಿಕ್ಕಮಗಳೂರು

By

Published : Dec 6, 2020, 5:07 PM IST

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮತ್ತೊಮ್ಮೆ ಗ್ರಾಮ ಪಂಚಾಯತ್ ಚುನಾವಣೆ ಬಹಿಷ್ಕಾರದ ಕೂಗು ಕೇಳಿ ಬರುತ್ತಿದೆ.

ಗ್ರಾಮ ಪಂಚಾಯತ್ ಚುನಾವಣಾ ಬಹಿಷ್ಕಾರಕ್ಕೆ ಗ್ರಾಮಸ್ಥರು ಮುಂದಾದ ಜನರು

ಮೂಡಿಗೆರೆ ತಾಲೂಕಿನ ಹೊರನಾಡಿನಿಂದ ಶೃಂಗೇರಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಅಸಮರ್ಪಕ ಕಾಮಗಾರಿ ವಿರೋಧಿಸಿ ಹಾಗೂ ರಸ್ತೆ ಅಗಲೀಕರಣಕ್ಕೆ ಒತ್ತಾಯಿಸಿ ಮೇಲ್ ಮಂಚಿಗೆ, ಕಬ್ಬಿನ ಕುಂಬ್ರಿ, ಚಿಕ್ಕನಕುಡಿಗೆ, ಕೆಸವಿನಹೊಂಡ, ಅಣೆಅಡಿ, ದಂಟಗ, ಬಳಿಗೋಳ್, ಹೊನ್ನೆಕಾಡು, ತುರ, ಬಲಿಗೆ, ಹೊನ್ನೆ ಕಾಡುಮಕ್ಕಿ, ಮೆಣಸಿಹಾಡ್ಯ, ಸೋಮನಕಟ್ಟೆ, ಮಾವಿನಹೊಲ, ಆಡಿನ್ ಕೆರೆ, ಮರಡಿ, ತೋಟದ ಮನೆ, ಮಣ್ಣಿನ್ ಪಾಲ್, ಹೊಸನೆಲ, ಗೋರ್ ಗಲ್, ಕವನಹಳ್ಳಿ ಗ್ರಾಮಸ್ಥರು ಗ್ರಾಮ ಪಂಚಾಯತ್ ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.

ಹೊರನಾಡಿನಿಂದ ಶೃಂಗೇರಿಗೆ ಬಲಿಗೆ ಮೆಣಸಿನ ಹಾಡ್ಯ ಅತೀ ಹತ್ತಿರದ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಹೊರನಾಡಿನಿಂದ ಬಲಿಗೆ ವರೆಗೆ 6.50 ಕಿ.ಮೀ ರಸ್ತೆಯಲ್ಲಿ 2018 ರಲ್ಲಿ 8.50 ಕೋಟಿ ಅನುದಾನ ಬಿಡುಗಡೆ ಮಾಡಲಾಗಿತ್ತು. ಈ ವರೆಗೂ 3 ಕಿ.ಮೀ ದುರಸ್ತಿಗೊಳಿಸಲಾಗಿದ್ದು, ಕಳೆದ ವರ್ಷದ ಜನ ಸಂಪರ್ಕ ಸಭೆಯಲ್ಲಿ ಈ ರಸ್ತೆಯ ಅವೈಜ್ಞಾನಿಕ ರಸ್ತೆ ಅಗಲೀಕರಣ ಹಾಗೂ ಕಾಮಗಾರಿ ಬಗ್ಗೆ ಹೇಳಿದ್ದರೂ ಯಾವುದೇ ರೀತಿಯ ಪ್ರಯೋಜನ ಆಗಿಲ್ಲ ಎಂದು ಕಿಡಿಕಾರಿದರು.

ಈ ರಸ್ತೆಯಲ್ಲಿ ಸಂಚಾರ ಮಾಡುವ ಪ್ರವಾಸಿಗರಿಗೆ ಹಾಗೂ ಸ್ಥಳೀಯರಿಗೆ ತುಂಬಾ ತೊಂದರೆಯಾಗುತ್ತಿದ್ದು, ಕೂಡಲೇ ಈ ರಸ್ತೆಯ ದುರಸ್ತಿ ಕಾರ್ಯ ಮಾಡಬೇಕು. ಇಲ್ಲದಿದ್ದರೆ ನಾವು ಗ್ರಾಮ ಪಂಚಾಯತ್ ಚುನಾವಣೆ ಬಹಿಷ್ಕಾರ ಮಾಡುತ್ತೇವೆ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ABOUT THE AUTHOR

...view details