ಕರ್ನಾಟಕ

karnataka

ETV Bharat / state

ಆರ್ಥಿಕವಾಗಿ, ದೈಹಿಕವಾಗಿ ಸಬಲರಾದಾಗ ವಿವಾಹದ ಬಗ್ಗೆ ಆಲೋಚಿಸಬೇಕು: ಬಸವರಾಜ್ ಚೇಂಗಟಿ - ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಸವರಾಜ್ ಚೇಂಗಟಿ

ಇತ್ತೀಚೆಗೆ ಜಿಲ್ಲೆಯಲ್ಲಿ ಮಕ್ಕಳ ದೌರ್ಜನ್ಯ ಹಾಗೂ ಬಾಲ್ಯವಿವಾಹದಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಅವುಗಳನ್ನು ತಡೆಯಲು ಮಕ್ಕಳ ಕಲ್ಯಾಣ ಸಮಿತಿ ಹಾಗೂ ರಕ್ಷಣಾ ಘಟಕಗಳಿದ್ದು ಜೊತೆಗೆ, ಮಕ್ಕಳ ಹಕ್ಕು ರಕ್ಷಣೆಗೆ ಕಾನೂನು ನಿಯಮಗಳಿವೆ ಅವುಗಳ ತಿಳುವಳಿಕೆ ಹೊಂದುವುದು ಅವಶ್ಯಕವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಸವರಾಜ್ ಚೇಂಗಟಿ ಹೇಳಿದ್ದಾರೆ .

ಕಾನೂನು ಅರಿವು ಕಾರ್ಯಕ್ರಮ
ಕಾನೂನು ಅರಿವು ಕಾರ್ಯಕ್ರಮ

By

Published : Feb 14, 2020, 2:19 AM IST

ಚಿಕ್ಕಮಗಳೂರು: ಅಪ್ರಾಪ್ತ ಮಕ್ಕಳನ್ನು ವಿವಾಹ ಮಾಡುವುದು ಕಾನೂನಿನ ಅಡಿ ಶಿಕ್ಷಾರ್ಹ ಅಪರಾಧವಾಗಿದ್ದು, ಕಾನೂನು ನಿಯಮಗಳ ಬಗ್ಗೆ ಪೋಷಕರು, ಹಾಗೂ ಮಕ್ಕಳು ತಿಳಿದುಕೊಳ್ಳುವುದು ಅವಶ್ಯಕ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಸವರಾಜ್ ಚೇಂಗಟಿ ಹೇಳಿದ್ದಾರೆ.

ನಗರದ ಮೌಂಟೆನ್ ವ್ಯೂ ವಿದ್ಯಾಸಂಸ್ಥೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು, ಬಾಲ್ಯ ವಿವಾಹ ಒಂದು ಸಾಮಾಜಿಕ ಪಿಡುಗಾಗಿದ್ದು, ಇತ್ತೀಚೆಗೆ ಜಿಲ್ಲೆಯಲ್ಲಿ ಮಕ್ಕಳ ದೌರ್ಜನ್ಯ ಹಾಗೂ ಬಾಲ್ಯವಿವಾಹದಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಅವುಗಳನ್ನು ತಡೆಯಲು ಮಕ್ಕಳ ಕಲ್ಯಾಣ ಸಮಿತಿ ಹಾಗೂ ರಕ್ಷಣಾ ಘಟಕಗಳಿದ್ದು ಜೊತೆಗೆ, ಮಕ್ಕಳ ಹಕ್ಕು ರಕ್ಷಣೆಗೆ ಕಾನೂನು ನಿಯಮಗಳಿವೆ ಅವುಗಳ ತಿಳುವಳಿಕೆ ಹೊಂದುವುದು ಅವಶ್ಯಕವಾಗಿದೆ ಎಂದರು.

ಕಾನೂನು ಅರಿವು ಕಾರ್ಯಕ್ರಮ

ಪ್ರತಿ ಮಕ್ಕಳು ದೇಶದ ಆಸ್ತಿಯಾಗಿದ್ದು, ಮೊದಲು ಆರೋಗ್ಯ, ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಆರ್ಥಿಕವಾಗಿ, ದೈಹಿಕವಾಗಿ ಸಬಲರಾದಾಗ ವಿವಾಹದ ಕುರಿತು ಆಲೋಚಿಸಬೇಕು. ಚಿಕ್ಕ ವಯಸ್ಸಿನಲ್ಲಿ ವಿವಾಹವಾಗುವುದರಿಂದ ಹಲವು ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ. ಕೀಳರಿಮೆ ಮನೋಭಾವ ಬಿಟ್ಟು ಬಾಲ್ಯದಿಂದಲೇ ಉತ್ತಮ ಹವ್ಯಾಸಗಳನ್ನು ರೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ABOUT THE AUTHOR

...view details