ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರು: ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲು - three youths drowned while swimming in kaduru

ಈಜಲು ತೆರಳಿದ್ದ ಮೂವರು ಯುವಕರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ನಡೆದಿದೆ.

three-youths-drowned-in-lake-at-kaduru
ಚಿಕ್ಕಮಗಳೂರು: ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲು

By

Published : Jun 19, 2022, 7:23 PM IST

ಚಿಕ್ಕಮಗಳೂರು: ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲಾದ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಅಣ್ಣೆಗೆರೆ ಗ್ರಾಮದಲ್ಲಿ ನಡೆದಿದೆ. ದರ್ಶನ್ (16), ರಾಕೇಶ್ (18) ಹಾಗೂ ಕಿರಣ್ (20) ಎಂಬುವರು ಮೃತಪಟ್ಟ ಯುವಕರಾಗಿದ್ದಾರೆ.

ಆರು ಜನ ಯುವಕರು ಕೆರೆಗೆ ಈಜಲು ತೆರಳಿದ್ದ ವೇಳೆ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇವರೆಲ್ಲರೂ ಕಡೂರು ತಾಲೂಕಿನ ಬಿಟ್ಟೇನಹಳ್ಳಿ ಗ್ರಾಮದವರಾಗಿದ್ದಾರೆ. ಇಬ್ಬರ ಮೃತದೇಹ ಪತ್ತೆಯಾಗಿದ್ದು, ಮತ್ತೋರ್ವನ ಶವಕ್ಕಾಗಿ ಶೋಧ ಮುಂದುವರೆದಿದೆ.

ಅಗ್ನಿಶಾಮಕ ದಳ, ಪೊಲೀಸ್ ಸಿಬ್ಬಂದಿ ಕಾರ್ಯಚರಣೆ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಪಂಚನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ:ಬೆಣ್ಣೆಹಳ್ಳದಲ್ಲಿ ಸ್ನಾನಕ್ಕೆ ಇಳಿದಾಗ ಫಿಟ್ಸ್ ಬಂದು ಯುವಕ ಸಾವು

For All Latest Updates

ABOUT THE AUTHOR

...view details