ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ತೇಗೂರು ಗುಡ್ಡದಲ್ಲಿ ಹುಲಿಯೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ತೇಗೂರು ಗುಡ್ಡದಲ್ಲಿ ಅನುಮಾನಾಸ್ಪದವಾಗಿ ಹುಲಿ ಸಾವು - ತೇಗೂರು ಗುಡ್ಡದಲ್ಲಿ ಅನುಮಾನಾಸ್ಪದವಾಗಿ ಹುಲಿ ಸಾವು ಹುಲಿ ಸಾವು
ತರೀಕೆರೆ ತಾಲೂಕಿನ ತೇಗೂರು ಗುಡ್ಡದಲ್ಲಿ ಹುಲಿಯೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದೆ. ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹೆಣ್ಣು ಹುಲಿಯ ಕಳೇಬರ ಪತ್ತೆಯಾಗಿದೆ.
ತೇಗೂರು ಗುಡ್ಡದಲ್ಲಿ ಅನುಮಾನಾಸ್ಪದವಾಗಿ ಹುಲಿ ಸಾವು
ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಹೆಬ್ಬೆ ವಲಯ ವ್ಯಾಪ್ತಿಯಲ್ಲಿ ಸುಮಾರು 6 ವರ್ಷದ ಹೆಣ್ಣು ಹುಲಿಯ ಕಳೇಬರ ಪತ್ತೆಯಾಗಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಈ ಹೆಣ್ಣು ಹುಲಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗುತ್ತಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಹುಲಿಯ ಮರಣೋತ್ತರ ಪರೀಕ್ಷೆಯ ನಂತರವೇ ಸಾವಿಗೆ ನಿಖರ ಕಾರಣವೇನು ಎಂಬುದು ತಿಳಿಯಬೇಕಿದೆ.