ಕರ್ನಾಟಕ

karnataka

ETV Bharat / state

ದತ್ತಜಯಂತಿ : ಚಿಕ್ಕಮಗಳೂರಿನಲ್ಲಿ ಬಿಗಿ ಪೊಲೀಸ್​​​ ಬಂದೋಬಸ್ತ್​

ಚಿಕ್ಕಮಗಳೂರು ಜಿಲ್ಲೆಯ ದತ್ತಪೀಠದಲ್ಲಿ ನಡೆಯಲಿರುವ ದತ್ತ ಜಯಂತಿ ಹಿನ್ನೆಲೆ, ಜಿಲ್ಲೆಯಲ್ಲಿ ಬಿಗಿ ಪೊಲೀಸ್​​ ಬಿಗಿ ಬಂದೋಬಸ್ತ್​​ ಏರ್ಪಡಿಸಿದ್ದು, ಅದಕ್ಕೂ ಮುನ್ನ ನಗರದ ಬೀದಿಗಳಲ್ಲಿ ಪೊಲೀಸರು ಪೆರೇಡ್​​ ನಡೆಸಿದರು.

Parade by police in chikkmagaluru
ಪಥಸಂಚಲನ ಮಾಡುತ್ತಿರುವ ಪೊಲೀಸರು

By

Published : Dec 9, 2019, 4:51 PM IST

ಚಿಕ್ಕಮಗಳೂರು:ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ವತಿಯಿಂದ ನಗರದಲ್ಲಿ ನಡೆಯುತ್ತಿರುವ ದತ್ತಜಯಂತಿ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಎರಡು ಸಾವಿರಕ್ಕೂ ಅಧಿಕ ಪೊಲೀಸರು ನಗರದ ಟೌನ್ ಕ್ಯಾಂಟಿನ್ ಸರ್ಕಲ್​ನಿಂದ ಬೋಳರಾಮೇಶ್ವರ ದೇವಾಲಯದವರೆಗೆ ಚಿಕ್ಕಮಗಳೂರು ಎಸ್ಪಿ ಹರೀಶ್ ಪಾಂಡೆ ನೇತೃತ್ವದಲ್ಲಿ ಪರೇಡ್ ನಡೆಸಿದ್ದಾರೆ. ಇನ್ನು ಜಿಲ್ಲೆಯಾದ್ಯಂತ ಶಾಂತಿ ಕಾಪಾಡುವಂತೆ ಸಾರ್ವಜನಿಕರಲ್ಲಿ ಪೊಲೀಸರು ಮನವಿ ಮಾಡಿದ್ದು, ಪಥಸಂಚಲನ ಮಾಡುವ ಮೂಲಕ ಕೋಮು ಗಲಭೆಗೆ ಪ್ರಚೋದನೆ ನೀಡುವ ಕಿಡಿಗೇಡಿಗಳಿಗೆ ಖಡಕ್ ಸಂದೇಶವನ್ನು ನೀಡಿದ್ದಾರೆ.

ಪಥಸಂಚಲನ ಮಾಡುತ್ತಿರುವ ಪೊಲೀಸರು

ದತ್ತ ಜಯಂತಿಯ ಭದ್ರತೆ ದೃಷ್ಟಿಯಿಂದ ಐದು ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಸುಮಾರು 25 ಸಾವಿರಕ್ಕೂ ಅಧಿಕ ದತ್ತ ಭಕ್ತರು ದತ್ತ ಜಯಂತಿಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇರುವ ಹಿನ್ನೆಲೆ, ನಗರ ಹಾಗೂ ದತ್ತಪೀಠದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ABOUT THE AUTHOR

...view details