ಕರ್ನಾಟಕ

karnataka

ETV Bharat / state

ನಾಳೆಯಿಂದ ಕಾಫಿನಾಡಿನ ಗಿರಿಧಾಮಗಳಲ್ಲಿ ಪ್ರವಾಸಿಗರಿಗೆ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ

ಮೂರು ದಿನಗಳ ಕಾಲ ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ ಹಮ್ಮಿಕೊಂಡಿರುವ ದತ್ತ ಜಯಂತಿ ಕಾರ್ಯಕ್ರಮ ಇರುವುದರಿಂದ ಚಿಕ್ಕಮಗಳೂರಿನ ಕೆಲವೆಡೆ ಪ್ರವಾಸಕ್ಕೆ ಬ್ರೇಕ್ ಹಾಕಲಾಗಿದೆ.

chikkamagaluru dc order
ಕಾಫಿನಾಡಿನ ಗಿರಿಧಾಮಗಳಲ್ಲಿ ಪ್ರವಾಸಿಗರಿಗೆ ನಿರ್ಬಂಧ

By

Published : Dec 15, 2021, 7:35 AM IST

ಚಿಕ್ಕಮಗಳೂರು:ಕಾಫಿನಾಡಿನ ಗಿರಿಧಾಮಗಳಿಗೆ ಪ್ರವಾಸಿಗರ ಆಗಮನಕ್ಕೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ನಾಳೆಯಿಂದ ಡಿ. 20ರವರೆಗೆ ಪ್ರವಾಸಿಗರಿಗೆ ಬ್ರೇಕ್ ಹಾಕಲಾಗಿದೆ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ದತ್ತಪೀಠ, ಗಾಳಿಕೆರೆ, ಮಾಣಿಕ್ಯಧಾರ, ಹೊನ್ನಮ್ಮನಹಳ್ಳಕ್ಕೆ ನಿರ್ಬಂಧ ಹೇರಲಾಗಿದೆ.

ಡಿ.17ರಿಂದ 19ರವರೆಗೆ ಮೂರು ದಿನಗಳ ಕಾಲ ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳದಿಂದ ದತ್ತ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಡಿ.16ರ ಬೆಳಗ್ಗೆ 6 ಗಂಟೆಯಿಂದ ಡಿ. 20ರ ಬೆಳಗ್ಗೆ 6 ಗಂಟೆವರೆಗೆ ಪ್ರವಾಸಿಗರಿಗೆ ನಿಷೇಧ ವಿಧಿಸಲಾಗಿದೆ.

ಜಿಲ್ಲಾಧಿಕಾರಿ ಆದೇಶದ ಪ್ರತಿ

ಜಿಲ್ಲೆಯ ಬೇರೆ ಪ್ರವಾಸಿ ತಾಣಗಳಿಗೆ ಯಾವುದೇ ನಿರ್ಬಂಧವಿಲ್ಲ. ಹೋಟೆಲ್, ರೆಸಾರ್ಟ್, ಹೋಂಸ್ಟೇ ಬುಕ್ ಆಗಿದ್ದರೆ ವಾಸ್ತವ್ಯಕ್ಕೆ ನಿರ್ಬಂಧವಿಲ್ಲ. ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗ ಮಾತ್ರ ನಿರ್ಬಂಧ ವಿಧಿಸಿ ಪ್ರವಾಸಿಗರಿಗೆ ಸಂಪೂರ್ಣ ನಿಷೇಧ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಸೋಲಿಸಲು ಸ್ಪರ್ಧಿಸಿರಲಿಲ್ಲ, ಗೆಲ್ಲಲೇಬೇಕೆಂದು ಸ್ಪರ್ಧಿಸಿದ್ವಿ; ರಮೇಶ್​ ಜಾರಕಿಹೊಳಿಗೆ ಹೆಬ್ಬಾಳ್ಕರ್ ಟಾಂಗ್

ABOUT THE AUTHOR

...view details