ಚಿಕ್ಕಮಗಳೂರು: ಕೊರೊನಾ ಎರಡನೇ ಅಲೆ ಹಿನ್ನೆಲೆ ಹೇರಿದ್ದ ಲಾಕ್ಡೌನ್ ತೆರವುಗೊಂಡಿದ್ದೇ ತಡ ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗ್ತಿದೆ. ಕೊರೊನಾ ಕಾಟದಿಂದ ಬೇಸತ್ತಿದ್ದ ಜನ್ರು ರಿಲ್ಯಾಕ್ಸ್ಗಾಗಿ ಚಿಕ್ಕಮಗಳೂರು ಜಿಲ್ಲೆಗೆ ಲಗ್ಗೆ ಇಡುತ್ತಿದ್ದು, ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಪ್ರವಾಸಿಗರು ದಂಡು-ದಂಡಾಗಿ ಕಾಣುತ್ತಿದ್ದಾರೆ.
ಈ ಭಾಗದಲ್ಲಿ ಪ್ರಕೃತಿ ಸೌಂದರ್ಯ ಅನಾವರಣಗೊಂಡಿದೆ. ಹಚ್ಚಹಸುರಿನ ಬೆಟ್ಟ-ಗುಡ್ಡಗಳು ಹಾಗೂ ರಸ್ತೆ ಯುದ್ದಕ್ಕೂ ಸುರಿಯುವ ಜಲಪಾತಗಳು ಪ್ರವಾಸಿಗರನ್ನು ತನ್ನತ್ತ ಕೈಬೀಸಿ ಕರೆಯುತ್ತಿವೆ. ದಾರಿ ಮಧ್ಯೆ ಸಿಗುವ ಫಾಲ್ಸ್ಗಳ ಬಳಿ ಪ್ರವಾಸಿಗರು ಕಿಕ್ಕಿರಿದು ಸೇರಿದ್ದಾರೆ.