ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರು ಜಿಲ್ಲೆಗೆ ವಿದೇಶ, ಹೊರ ರಾಜ್ಯ, ಹೊರ ಜಿಲ್ಲೆ ಪ್ರವಾಸಿಗರಿಗೆ ನಿಷೇಧ - Chikkamagalur news

ಚಿಕ್ಕಮಗಳೂರಿಗೆ ವಿದೇಶ, ಹೊರ ರಾಜ್ಯ ಹಾಗೂ ಅಂತರ್​ ಜಿಲ್ಲೆಗಳಿಂದ ಬರುವ ಎಲ್ಲಾ ಪ್ರವಾಸಿಗರಿಗೆ ನಿಷೇಧ ಹೇರಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್​ ಆದೇಶ ಹೊರಡಿಸಿದ್ದಾರೆ.

ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್​  ಆದೇಶ
ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್​ ಆದೇಶ

By

Published : Jul 6, 2020, 5:04 PM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿದೇಶ, ಹೊರ ರಾಜ್ಯ ಹಾಗೂ ಅಂತರ್​ ಜಿಲ್ಲೆಗಳಿಂದ ಬರುವಂತಹ ಎಲ್ಲಾ ಪ್ರವಾಸಿಗರಿಗೆ ನಿಷೇಧ ಹೇರಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್​ ಮಹತ್ವದ ಆದೇಶ ಹೊರಡಿಸಿದ್ದಾರೆ.

ಈ ಪ್ರವಾಸಿಗರಿಗೆ ಹೋಟೆಲ್, ರೆಸಾರ್ಟ್, ಹೋಮ್ ಸ್ಟೇ ಹಾಗೂ ಇತರೆ ವಸತಿ ಸೌಕರ್ಯಗಳನ್ನು ನೀಡುವುದನ್ನು ನಿರ್ಬಂಧಿಸಲಾಗಿದೆ. ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಕೋವಿಡ್-19 ನಿಯಂತ್ರಣ ಸಲುವಾಗಿ ಮತ್ತು ಕಾನೂನು-ಸುವ್ಯವಸ್ಥೆಗೆ ಆದ್ಯತೆ ನೀಡಿ ಈ ಆದೇಶ ಮಾಡಲಾಗಿದೆ.

ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳ ಪ್ರವೇಶ ದ್ವಾರ, ಕೇಂದ್ರಗಳಲ್ಲಿ ಅಂತರ್​​ರಾಜ್ಯ, ಅಂತರ್ ಜಿಲ್ಲೆಯಿಂದ ಬರುವಂತಹ ಪ್ರವಾಸಿಗರಿಗೆ ಪ್ರವಾಸಿ ತಾಣದ ಒಳಗೆ ಪ್ರವೇಶ ನೀಡದಂತೆ ನಿರ್ಬಂಧ ಹೇರುವ ಮೂಲಕ ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಮಹತ್ವದ ಆದೇಶವನ್ನು ಹೊರಡಿಸಿದ್ದಾರೆ.

ABOUT THE AUTHOR

...view details