ಕರ್ನಾಟಕ

karnataka

ETV Bharat / state

ಟ್ರ್ಯಾಕ್ಟರ್ - ಬೈಕ್ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು - ಅಜ್ಜಂಪುರದಲ್ಲಿ ಟ್ರ್ಯಾಕ್ಟರ್ ಮತ್ತು ಬೈಕ್ ಅಪಘಾತ

ಅಡಿಕೆ ತುಂಬಿದ ಟ್ರ್ಯಾಕ್ಟರ್ ಬೈಕ್​ಗೆ ಗುದ್ದಿ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಅಜ್ಜಂಪುರದ ಬಳಿ ನಡೆದಿದೆ.

Tractor, bike accident,ಟ್ರ್ಯಾಕ್ಟರ್ ಮತ್ತು ಬೈಕ್ ಅಪಘಾತ,

By

Published : Nov 11, 2019, 10:39 PM IST

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಅಜ್ಜಂಪುರದ ಬಳಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ನಡೆದ ಅಪಘಾತ ಸಂಭವಿಸಿದ್ದು, ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಮಹೇಶ್ (25), ಮೌನೇಶ್ (26) ಮೃತ ದುರ್ದೈವಿಗಳು. ಅಜ್ಜಂಪುರದ ಬಾಣೂರು ಗ್ರಾಮದಿಂದ ಮೃತ ವ್ಯಕ್ತಿಗಳು ಬೈಕ್​ನಲ್ಲಿ ಬರುತ್ತಿದ್ದರು. ಈ ವೇಳೆ ಅಡಿಕೆ ತುಂಬಿದ ಟ್ರ್ಯಾಕ್ಟರ್ ಬೈಕ್​ಗೆ ಗುದ್ದಿದೆ. ಪರಿಣಾಮ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆ ನಡೆದ ಸ್ಥಳದಿಂದ ಟ್ರ್ಯಾಕ್ಟರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಅಜ್ಜಂಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details