ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದ್ದು, ನಿರಂತರವಾಗಿ ಈ ಭಾಗದಲ್ಲಿ ಮಳೆಯೂ ಸುರಿಯುತ್ತಿದೆ. ರಸ್ತೆಗೆ ಮರಗಳು ಉರುಳುತ್ತಿದ್ದು, ಭೂಕುಸಿತ ಸಾಧ್ಯತೆ ಇದೆ. ಹೀಗಾಗಿ ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಸಂಚಾರ ಬಂದ್ ಮಾಡಲಾಗಿದೆ.
ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಚಾರ್ಮಾಡಿ ಘಾಟ್‌ನಲ್ಲಿ ಸಂಚಾರ ಬಂದ್ - chikmagaluru latest news
ಶಿರಾಡಿ ಘಾಟ್ ಬಂದ್ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟಿಯಲ್ಲಿ ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ.
ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಚಾರ್ಮಾಡಿ ಘಾಟ್ ನಲ್ಲಿ ಸಂಚಾರ ಬಂದ್
ಎಲ್ಲಾ ರೀತಿಯ ವಾಹನ ಸಂಚಾರ ಬಂದ್ ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ಆದೇಶ ಹೊರಡಿಸಿದ್ದಾರೆ. ಶಿರಾಡಿ ಘಾಟ್ ಬಂದ್ ಹಿನ್ನೆಲೆ ಚಾರ್ಮಾಡಿ ಮಾರ್ಗವಾಗಿ ವಾಹನಗಳು ಸಂಚರಿಸುತ್ತಿವೆ.
ಚಾರ್ಮಾಡಿಯಲ್ಲಿ ರಾತ್ರಿ ಸಂಚಾರಕ್ಕೆ ಸಂಪೂರ್ಣ ಕಡಿವಾಣ ಹಾಕಲಾಗಿದ್ದು, ಆದೇಶ ಹೊರಡಿಸುತ್ತಿದ್ದಂತೆ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು ಅಲರ್ಟ್ ಆಗಿದ್ದಾರೆ. ಡಿಸಿ ಆದೇಶ ಹೊರಡಿಸುತ್ತಿದ್ದಂತೆ ಪೊಲೀಸರು ಟ್ರಾಫಿಕ್ ಬಂದ್ ಮಾಡಿದ್ದು, ಮಾಹಿತಿ ಇಲ್ಲದೆ ಬಂದ ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ.