ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ವರುಣನ ರೌದ್ರಾವತಾರಕ್ಕೆ ಎಲ್ಲೆಂದರಲ್ಲಿ ಮರಗಳು ಧರೆಗೆ ಉರುಳುತ್ತಿವೆ. ನಿರಂತರವಾಗಿ ಮಲೆನಾಡು ಭಾಗದಲ್ಲಿ ಮಳೆ ಸುರಿಯುತ್ತಿರುವ ಕಾರಣ, ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರದ ಕೊಂಬೆಗಳು ಬಿದ್ದಿವೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಳೆ ಮೂಡಿಗೆರೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರದ ಕೊಂಬೆಗಳು ಮುರಿದು ಬಿದ್ದಿವೆ.
ಮಾಜಿ ಸಚಿವೆ ಮೋಟಮ್ಮ ಸಹೋದರ ಅನಂತು ಕಾರಿನ ಮೇಲೆ ಕೊಂಬೆಗಳು ಬಿದ್ದಿದ್ದು, ಎಂ.ಎಸ್ ಅನಂತು ಪತ್ನಿ ಸೇರಿದಂತೆ ಕಾರಿನಲ್ಲಿದ್ದ ಐವರು ಈ ವೇಳೆ ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾರೆ.