ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರು: ಭಾರಿ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಬೃಹದಾಕಾರದ ಮರ - ಮಲೆನಾಡು ಭಾಗದಲ್ಲಿ ಮಳೆ

ಮಾಂಡೌಸ್ ಚಂಡಮಾರುತದ ಪರಿಣಾಮ ಕಳೆದ ನಾಲ್ಕೈದು ದಿನಗಳಿಂದ ಮಲೆನಾಡು ಭಾಗದಲ್ಲಿ ಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ. ಪರಿಣಾಮ ಅರೆಕೊಡಿಗೆ ಸಮೀಪದ ಸುಕಲಮಕ್ಕಿ ಗ್ರಾಮದ ನರೇಂದ್ರ ಗೌಡ ಎಂಬುವರ ಮನೆ ಮೇಲೆ ಬೃಹದಾಕಾರದ ಮರ ಬಿದ್ದಿದ್ದು, ಮನೆ ಸಂಪೂರ್ಣ ಜಖಂಗೊಂಡಿದೆ.

tree fell on the house at chikkamagaluru
ಮನೆ ಮೇಲೆ ಬಿದ್ದ ಬೃಹದಾಕಾರದ ಮರ

By

Published : Dec 15, 2022, 7:25 AM IST

ಮನೆ ಮೇಲೆ ಬಿದ್ದ ಬೃಹದಾಕಾರದ ಮರ

ಚಿಕ್ಕಮಗಳೂರು: ಭಾರಿ ಗಾಳಿ, ಮಳೆಗೆ ಬೃಹತ್ ಮರವೊಂದು ಬಿದ್ದ ಪರಿಣಾಮ ಮನೆ ಸಂಪೂರ್ಣ ಜಖಂಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮರ್ಕಲ್ ಗ್ರಾಮದಲ್ಲಿ ನಡೆದಿದೆ.

ಮಾಂಡೌಸ್ ಚಂಡಮಾರುತದ ಪರಿಣಾಮ ಕಳೆದ ನಾಲ್ಕೈದು ದಿನಗಳಿಂದ ಮಲೆನಾಡು ಭಾಗದಲ್ಲಿ ಮಳೆ ಸುರಿಯುತ್ತಿದೆ. ಭಾರಿ ಮಳೆ-ಗಾಳಿಗೆ ಮರ್ಕಲ್ ಗ್ರಾಮದ ಅರೆಕೊಡಿಗೆ ಸಮೀಪದ ನರೇಂದ್ರ ಗೌಡ ಎಂಬುವರ ಮನೆ ಮೇಲೆ ಬೃಹದಾಕಾರದ ಮರ ಬಿದ್ದಿದ್ದು, ಮನೆಗೆ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಇದನ್ನೂ ಓದಿ:ಮಾಂಡೌಸ್ ಚಂಡಮಾರುತದ ಮಳೆಗೆ ಕಾಫಿ ಬೆಳೆಗಾರರು ಕಂಗಾಲು

ಇನ್ನು ವರುಣನ ಆರ್ಭಟಕ್ಕೆ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಕಾಫಿ, ಭತ್ತ, ಅಡಿಕೆ ಮೊದಲಾದ ಬೆಳೆಗಳು ನೆಲ ಕಚ್ಚಿದ್ದು, ರೈತರು ಕಂಗಾಲಾಗಿದ್ದಾರೆ. ಭತ್ತದ ಗದ್ದೆಗಳಲ್ಲಿ ನೀರು ಅವರಿಸಿದ್ದು, ಅಡಿಕೆ, ಕಾಫಿ, ಮೆಣಸು ಮಳೆ ನೀರಿಗೆ ಕೊಳೆಯುತ್ತಿದೆ ಎಂದು ಬೆಳೆಗಾರರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಕಾಫಿ ಬೆಳೆಗಾರರನ್ನು ಸಂಕಷ್ಟಕ್ಕೆ ಸಿಲುಕಿಸಿದ ಅಕಾಲಿಕ ಮಳೆ

ABOUT THE AUTHOR

...view details