ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಇಬ್ಬರು ಸ್ಥಳದಲ್ಲೇ ಸಾವು - ಚಿಕ್ಕಮಗಳೂರು
ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮದ ಬಳಿ ಈ ಘಟನೆ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ.
![ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಇಬ್ಬರು ಸ್ಥಳದಲ್ಲೇ ಸಾವು accident](https://etvbharatimages.akamaized.net/etvbharat/prod-images/768-512-7791479-thumbnail-3x2-dvg.jpg)
ಬೆಂಗಳೂರು ಮೂಲದ ಮಂಜುನಾಥ್ (30), ಮುತ್ತು ರಾಜ್ (28) ಮೃತಪಟ್ಟವರಾಗಿದ್ದು, ಬೆಂಗಳೂರಿನ ಸುಂಕದಕಟ್ಟೆಯ ಮೂಲದವರೆಂದು ತಿಳಿದು ಬಂದಿದೆ. ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮದ ಬಳಿ ಈ ಘಟನೆ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದ್ದು, ಅತಿ ವೇಗದ ಚಾಲನೆ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎನ್ನಲಾಗಿದೆ.
ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.