ಕರ್ನಾಟಕ

karnataka

ETV Bharat / state

ಕಾಫಿನಾಡಿನ ಈ ಎರಡು ಸರ್ಕಾರಿ ಶಾಲೆಗಳಿಗೆ ರಾಷ್ಟ್ರಮಟ್ಟದ ಮನ್ನಣೆ - chikmagalore two government schools news

ಉತ್ತಮ ಅಭ್ಯಾಸಗಳನ್ನು ಅಳವಡಿಕೆ ಮಾಡಿಕೊಂಡಿರುವ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಾಗಿ ಚಿಕ್ಕಮಗಳೂರು ಜಿಲ್ಲೆಯ ಎರಡು ಸರ್ಕಾರಿ ಶಾಲೆಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿವೆ.

chikmagalore
ಸರ್ಕಾರಿ ಶಾಲೆಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

By

Published : Jul 1, 2021, 6:33 PM IST

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಎರಡು ಸರ್ಕಾರಿ ಶಾಲೆಗಳು ಉತ್ತಮ ಅಭ್ಯಾಸ ರೂಢಿಸಿಕೊಂಡಿರುವ ವಿಭಾಗದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿವೆ. ರಾಜ್ಯ ಸರ್ಕಾರ 2021ರ ಜನವರಿಯಲ್ಲಿ ಪ್ರತಿ ಜಿಲ್ಲೆಯಲ್ಲಿ ಉತ್ತಮ ಅಭ್ಯಾಸ ರೂಢಿಸಿಕೊಂಡಿರುವ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳನ್ನು ಆಯ್ಕೆ ಮಾಡಿ ಕಳುಹಿಸಲು ಸೂಚನೆ ನೀಡಿತ್ತು.

ಸರ್ಕಾರಿ ಶಾಲೆಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಯಲಗುಡಿಗೆ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ತರೀಕೆರೆ ತಾಲೂಕಿನ ಸೊಕ್ಕೆ ಪ್ರೌಢಶಾಲೆ ಆಯ್ಕೆ ಆಗಿವೆ. ಉತ್ತಮ ಅಭ್ಯಾಸ ಕ್ರಮಗಳು ಮತ್ತು ಚಟುವಟಿಕೆಗಳನ್ನು ಅಳವಡಿಸಿಕೊಂಡಿರುವ ಶಾಲೆಗಳ 6 ನಿಮಿಷದ ವಿಡಿಯೋ ಮಾಡಿ ಕಳುಹಿಸುವಂತೆ ಸರ್ಕಾರ ಸೂಚನೆ ನೀಡಿತ್ತು. ಅದರಂತೆ ಈ ಎರಡು ಶಾಲೆಗಳು ವಿಡಿಯೋ ಕಳುಹಿಸಿಕೊಟ್ಟಿದ್ದವು.

ಸೊಕ್ಕೆ ಸರಕಾರಿ ಪ್ರೌಢಶಾಲೆ ಹಾಗೂ ಯಲಗುಡಿಗೆ ಶಾಲೆಯ ಶಿಕ್ಷಕರ ಪರಿಶ್ರಮದಿಂದ ಈ ಶಾಲೆಗಳಲ್ಲಿ ಕೌಶಲ್ಯಪೂರ್ಣ ಅಭ್ಯಾಸದ ಜೊತೆಗೆ ಉತ್ತಮ ಚಟುವಟಿಕೆಗಳ ಮೂಲಕ ಮಕ್ಕಳಿಗೆ ಶಿಕ್ಷಣ ನೀಡಲಾಗುತ್ತಿದೆ. ಉತ್ತಮ ಶಾಲೆಗಳ ಪಟ್ಟಿಯಲ್ಲಿ ಆಯ್ಕೆಯಾದ ಶಾಲೆಗಳಿಗೆ ಸರ್ಕಾರದಿಂದ 5,000 ಪ್ರೋತ್ಸಾಹ ಧನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುತ್ತದೆ.

ಜಿಲ್ಲೆಯ ಎರಡು ಶಾಲೆಗಳಿಗೆ ಪ್ರಶಸ್ತಿ ಲಭಿಸಿರುವುದಕ್ಕೆ ಜಿಲ್ಲೆಯ ಜನತೆ ಹಾಗೂ ಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಪ್ರಿಪೇಯ್ಡ್‌ ಮೊಬೈಲ್‌ ರಿಚಾರ್ಜ್‌ ಆಯ್ತು, ಇದೀಗ ಪ್ರಿಪೇಯ್ಡ್‌ ವಿದ್ಯುತ್‌ ಮೀಟರ್‌ ಪ್ರಯೋಗ! ಏನಿದು? ಸಂಪೂರ್ಣ ಮಾಹಿತಿ ಇಲ್ಲಿದೆ..

For All Latest Updates

ABOUT THE AUTHOR

...view details