ಚಿಕ್ಕಮಗಳೂರು: ನದಿಗೆ ಈಜಲು ತೆರಳಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ನಡೆದಿದೆ. ಮೃತರನ್ನು ಪ್ರಥಮ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಹಿರೇಬೈಲ್ ಗ್ರಾಮದ ಜೀವನ್ ದಾಸ್ (17) ಹಾಗೂ ಹೆಮ್ಮಕ್ಕಿ ಗ್ರಾಮದ ನಿಕ್ಷೇಪ್ (17) ಎಂದು ಗುರುತಿಸಲಾಗಿದೆ. ಇಂದು ಮನೆಯಿಂದ ಕಳಸದ ಕೆಪಿಎಸ್ ಕಾಲೇಜಿಗೆ ತೆರಳಿದ್ದ ಇವರು ಬಳಿಕ ಭದ್ರಾ ನದಿಯಲ್ಲಿ ಈಜಲು ಹೋಗಿದ್ದಾರೆ. ಈ ವೇಳೆ, ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ.
ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು - Two students drowned in Bhadra river
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿರುವ ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
![ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು Two students drowned in Bhadra river in Chikkamagaluru](https://etvbharatimages.akamaized.net/etvbharat/prod-images/768-512-14000793-thumbnail-3x2-megha.jpg)
ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು
ಇದನ್ನೂ ಓದಿ: ಸ್ನೇಹಿತರಿಂದಲೇ ದುಷ್ಕೃತ್ಯ: 20ರ ಯುವತಿ ಮೇಲೆ ಅತ್ಯಾಚಾರವೆಸಗಿದ ಕಾಮುಕರು
ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ಜೀವನ್ ದಾಸ್ನ ಮೃತದೇಹವನ್ನು ಹೊರಕ್ಕೆ ತೆಗೆದಿದ್ದು, ನಿಕ್ಷೇಪದ ಮೃತದೇಹಕ್ಕಾಗಿ ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಇತ್ತ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.