ಚಿಕ್ಕಮಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಜಿರೆಯ ಬಾಲಕನನ್ನು ಕಿಡಿಗೇಡಿಗಳು ಅಪಹರಿಸಿದ್ದಾರೆ ಎಂಬ ಮಾಹಿತಿ ಹಿನ್ನೆಲೆ, ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿ ಬಳಿಯ ಕೊಟ್ಟಿಗೆಹಾರ ಚೆಕ್ ಪೋಸ್ಟ್ನಲ್ಲಿ ಪೊಲೀಸರು ನಾಕಾಬಂಧಿ ಕೈಗೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಭಾಗದಿಂದ ಬರುತ್ತಿರುವ ವಾಹನಗಳನ್ನು ತಡೆದು ಪೊಲೀಸರು ತಪಾಸಣೆ ಮಾಡುತ್ತಿದ್ದಾರೆ. ಕೊಟ್ಟಿಗೆಹಾರ ಪೊಲೀಸರು ಚೆಕ್ಪೋಸ್ಟ್ನಲ್ಲಿ ಕಣ್ಗಾವಲಿಟ್ಟಿದ್ದು, ಬಣಕಲ್ ಪೊಲೀಸರು ಕೂಡ ಕೊಟ್ಟಿಗೆಹಾರದ ಬಳಿ ಮೊಕ್ಕಾಂ ಹೂಡಿದ್ದಾರೆ.