ಚಿಕ್ಕಮಗಳೂರು :ವಿಧಾನ ಪರಿಷತ್ ಸದಸ್ಯ ಹಾಗೂ ಅವರ ಪತ್ನಿ ಇಬ್ಬರಲ್ಲೂ ಕೊರೊನಾ ಸೋಂಕು ಪತ್ತೆಯಾಗಿದೆ. ಕೊರೊನಾ ಪಾಸಿಟಿವ್ ಬಂದಿರುವ ಕುರಿತು ವಿಧಾನಪರಿಷತ್ ಸದಸ್ಯ ಎಂ ಕೆ ಪ್ರಾಣೇಶ್ ಅವರೇ ಸಾಮಾಜಿಕ ಜಾಲತಾಣದಲ್ಲಿ ಹೇಳಿ ಕೊಂಡಿದ್ದಾರೆ. ಈಗಾಗಲೇ ಜಿಲ್ಲಾ ಕೋವಿಡ್ -19 ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ.
ವಿಧಾನ ಪರಿಷತ್ ಸದಸ್ಯ ಎಂ ಕೆ ಪ್ರಾಣೇಶ್ ಹಾಗೂ ಅವರ ಪತ್ನಿಗೆ ಸೋಂಕು - ಎಂ.ಕೆ ಪ್ರಾಣೇಶ್ ಹಾಗೂ ಅವರ ಪತ್ನಿಗೆ ಕೋವಿಡ್ ಧೃಢ
ಈ ವಿಷಯ ತಿಳಿದ ಕೂಡಲೇ ಎಲ್ಲರೂ ನನ್ನನ್ನು ಫೋನ್ ಮಾಡಿ, ಸಂಪರ್ಕ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ನಾನು ಚಿಕಿತ್ಸೆ ಪಡೆಯುತ್ತಿರುವ ಕಾರಣ ಕರೆಗಳನ್ನು ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ..

ಎಂ.ಕೆ ಪ್ರಾಣೇಶ್
ಕಳೆದ ಕೆಲ ದಿನಗಳ ಹಿಂದೆ ಬೆಂಗಳೂರಿಗೆ ಹೋಗಿ ಬಂದ ಹಿನ್ನೆಲೆ, ಸೋಂಕು ತಗುಲಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿದೆ. ಆದರೆ, ಈ ಬಗ್ಗೆ ಯಾರೂ ಯಾವುದೇ ಆತಂಕ ಪಡುವ ಅವಶ್ಯಕತೆ ಇಲ್ಲ. ಶೀಘ್ರದಲ್ಲೇ ನಾವು ಗುಣಮುಖರಾಗಿ ಹೊರ ಬರುತ್ತೇವೆ. ಈ ವಿಷಯ ತಿಳಿದ ಕೂಡಲೇ ಎಲ್ಲರೂ ನನ್ನನ್ನು ಫೋನ್ ಮಾಡಿ, ಸಂಪರ್ಕ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ನಾನು ಚಿಕಿತ್ಸೆ ಪಡೆಯುತ್ತಿರುವ ಕಾರಣ ಕರೆಗಳನ್ನು ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ ಎಂದು ತಮ್ಮ ಫೇಸ್ಬುಕ್ನಲ್ಲಿ ಖುದ್ದು ವಿಧಾನಪರಿಷತ್ ಸದಸ್ಯ ಎಂ ಕೆ ಪ್ರಾಣೇಶ್ ಅವರು ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ.