ಚಿಕ್ಕಮಗಳೂರು: ಗ್ರಾಮ ಪಂಚಾಯತ್ ಚುನಾವಣೆಯ ಪ್ರಚಾರಕ್ಕೆ ತೆರಳಿದ್ದ ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ.
ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಾಂಬಳೆ ಗ್ರಾಮದ ಜನರೊಂದಿಗೆ ಮಾತನಾಡುತ್ತಿದ್ದ ಸಂಸದೆ ಶೋಭಾ ಕರಂದ್ಲಾಜೆ, ಮೊಬೈಲ್ ನೆಟ್ವರ್ಕ್ ಸಮಸ್ಯೆ ಬಗೆಹರಿಸುವ ಕುರಿತು ಗ್ರಾಮಸ್ಥರ ಪ್ರಶ್ನೆಗೆ ಸರಿಯಾಗಿ ಉತ್ತರ ನೀಡುವಲ್ಲಿ ವಿಫಲರಾದಾಗ ರೊಚ್ಚಿಗೆದ್ದ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ.
ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಗ್ರಾಮಸ್ಥರ ಕಿಡಿ ಓದಿ:ಜೆಡಿಎಸ್ ಎಂಬ ಮಗು ಮಿಠಾಯಿ ತೋರಿಸಿದವರ ಕಡೆ ಹೋಗುತ್ತೆ: ಹೆಚ್.ವಿಶ್ವನಾಥ್
ಜೊತೆಗೆ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿಯನ್ನು ಗ್ರಾಮಸ್ಥರು ಪ್ರಶ್ನೆ ಮಾಡಿದ್ದು, ಈ ವೇಳೆ ಬಿಜೆಪಿ ಮುಖಂಡರು-ಸ್ಥಳೀಯರ ನಡುವೆ ಜಟಾಪಟಿ ನಡೆದಿದೆ. ಹಲವು ವರ್ಷಗಳಿಂದ ಕುದುರೆಮುಖ, ಜಾಂಬಳೆ, ಕೆಂಕನಕೊಂಡ, ಬಿಳಗಲ್, ನೆಲ್ಲಿಬೀಡಲ್ಲಿ ನೆಟ್ವರ್ಕ್ ಸಮಸ್ಯೆ ಎದುರಾಗಿದೆ. ಶಾಲಾ ಮಕ್ಕಳಿಗೆ ಆನ್ಲೈನ್ ಶಿಕ್ಷಣ ನಡೆಯುತ್ತಿದ್ದು, ಸರಿಯಾದ ನೆಟ್ವರ್ಕ್ ಇಲ್ಲದೇ ಸರಿಯಾದ ಶಿಕ್ಷಣ ದೊರಕುತ್ತಿಲ್ಲ. ಈ ಸಮಸ್ಯೆ ಬಗೆಹರಿಸಿ ಎಂದು ಗ್ರಾಮಸ್ಥರು ಸಂಸದೆ ಬಳಿ ಮನವಿ ಮಾಡಿದಾಗ ಮಾತಿಗೆ ಮಾತು ಬೆಳೆದು ಈ ಘಟನೆ ನಡೆದಿದೆ.