ಚಿಕ್ಕಮಗಳೂರು:ಪಶ್ಚಿಮ ಘಟ್ಟಗಳ ಸಾಲಿನಲ್ಲಿ ನಿರಂತರವಾಗಿ ಧಾರಾಕಾರ ಮಳೆಯಾಗುತ್ತಿದೆ. ಈ ಹಿನ್ನೆಲೆ ತುಂಗಾ ನದಿಯ ಒಳ ಹರಿವಿನಲ್ಲಿ ಭಾರಿ ಹೆಚ್ಚಳ ಕಂಡು ಬರುತ್ತಿದೆ. ಶೃಂಗೇರಿ ದೇವಾಲಯದ ಸುತ್ತಮುತ್ತಲಿನ ಪ್ರದೇಶ ಸಂಪೂರ್ಣ ಜಲಾವೃತವಾಗಿದ್ದು, ದೇವಾಲಯದ ಪ್ಯಾರಲ್ ರಸ್ತೆ, ಪಾರ್ಕಿಂಗ್ ಪ್ರದೇಶಕ್ಕೆ ನದಿ ನೀರು ನುಗ್ಗುತ್ತಿದೆ. ತುಂಗಾ ನದಿ ತುಂಬಿ ಹರಿಯುತ್ತಿದ್ದು, ಶೃಂಗರಿಯ ಶಾರದಾಂಬೆ ದೇವಸ್ಥಾನಕ್ಕೆ ಜಲದಿಗ್ಬಂದನವಾಗಿದೆ.
ಹೊರನಾಡು-ಶೃಂಗೇರಿ ಮಾರ್ಗದ ಸಂಚಾರ ಸ್ಥಗಿತ:ಜಿಲ್ಲೆಯ ಕೊಪ್ಪ ತಾಲೂಕಿನ ಗುಡ್ಡೆ ತೋಟ ಗ್ರಾಮದಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಹೊರನಾಡು-ಶೃಂಗೇರಿ ಮಾರ್ಗದ ಸಂಚಾರ ಸಂಪೂರ್ಣ ಸ್ಥಗಿತವಾಗಿದ್ದು, ರಸ್ತೆ ಮೇಲೆ ಮಣ್ಣು ಕುಸಿದಿರುವುದರಿಂದ ಸಂಚಾರ ಅಸ್ತವ್ಯಸ್ತವಾಗಿದೆ. ಭಾರಿ ಪ್ರಮಾಣದಲ್ಲಿ ರಸ್ತೆ ಮೇಲೆ ಗುಡ್ಡದ ಮಣ್ಣು ಕುಸಿದಿದ್ದು, ಸತತ ಮಳೆಯಿಂದ ಮಣ್ಣು ತೆರವು ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ. ನಾಲ್ಕೈದು ಮನೆಗಳ ಮೇಲೂ ಗುಡ್ಡ ಕುಸಿಯುವ ಭೀತಿ ಎದುರಾಗಿದ್ದು, ಆತಂಕದಲ್ಲಿ ಗ್ರಾಮದ ಕೂಲಿ ಕಾರ್ಮಿಕ ಕುಟುಂಬಗಳು ಬದುಕುವಂತಾಗಿದೆ.