ಚಿಕ್ಕಮಗಳೂರು :ಜಿಲ್ಲೆಯ ತರೀಕೆರೆ ತಾಲೂಕಿನ ಭದ್ರಾ ಅಭಯಾರಣ್ಯದ ತಣಿಗೆ ಬೈಲು ವ್ಯಾಪ್ತಿಯ ನಂದಿಬಟ್ಟಲು ಗ್ರಾಮದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಆನೆಯೊಂದು ಸ್ಥಳದಲ್ಲಿಯೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಚಿಕ್ಕಮಗಳೂರು : ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು - ಚಿಕ್ಕಮಗಳೂರಿನಲ್ಲಿ ಕಾಡಾನೆ ಸಾವು
ಜೋಳದ ಹೊಲಕ್ಕೆ ನುಗ್ಗಿದ ಕಾಡಾನೆ ವಿದ್ಯುತ್ ತಂತಿ ತುಳಿದ ಪರಿಣಾಮ ಸ್ಥಳದಲ್ಲೇ ಅಸುನೀಗಿರುವ ಘಟನೆ ತರೀಕೆರೆ ತಾಲೂಕಿನ ಭದ್ರಾ ಅಭಯಾರಣ್ಯದ ತಣಿಗೆ ಬೈಲು ವ್ಯಾಪ್ತಿಯ ನಂದಿಬಟ್ಟಲು ಗ್ರಾಮದಲ್ಲಿ ನಡೆದಿದೆ..
![ಚಿಕ್ಕಮಗಳೂರು : ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು](https://etvbharatimages.akamaized.net/etvbharat/prod-images/768-512-13623602-thumbnail-3x2-nsns.jpg)
ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು
ಪರಮೇಶ್ ಎಂಬುವರ ಜೋಳದ ಜಮೀನಿನಲ್ಲಿ ಆನೆ ಮೃತಪಟ್ಟಿದೆ. ಬೆಳೆಯನ್ನು ರಕ್ಷಣೆ ಮಾಡಿಕೊಳ್ಳುವ ಸಲುವಾಗಿ ಹಾಕಿದ್ದ ಅಕ್ರಮ ವಿದ್ಯುತ್ ತಂತಿ ತಗುಲಿ, ಸುಮಾರು 25 ವರ್ಷದ ಗಂಡು ಆನೆ ಸಾವನ್ನಪ್ಪಿದೆ ಎನ್ನಲಾಗಿದೆ.
ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ನವೀನ್, ವನ್ಯಜೀವಿ ಪರಿಪಾಲಕ ವಿರೇಶ್, ಭದ್ರಾ ವನ್ಯಜೀವಿ ಪಶುವೈದ್ಯಾಧಿಕಾರಿ ಯಶಸ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಆನೆಯ ಮರಣೋತ್ತರ ಪರೀಕ್ಷೆಗೆ ಕ್ರಮ ಕೈಗೊಂಡಿದ್ದಾರೆ.