ಚಿಕ್ಕಮಗಳೂರು: ಜಿಲ್ಲೆಯ ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚಿಗೆ ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪವಿರುವ ಘಾಟಿಯ ಸೋಮನಕಾಡು ಅರಣ್ಯದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ.
ಚಿಕ್ಕಮಗಳೂರು-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿಯಲ್ಲಿ ಬೆಂಕಿಯ ಕೆನ್ನಾಲಿಗೆಗೆ ದಟ್ಟ ಹೊಗೆ ಹರಡಿದ್ದು, ವಾಹನ ಸಂಚಾರಕ್ಕೂ ಅಡಚಣೆಯಾಗಿದೆ. ಬೆಂಕಿ ನಂದಿಸಲು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಕಿಡಿಗೇಡಿಗಳು ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗುತ್ತಿದೆ.