ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರು: ಹೇಮಾವತಿ ನದಿಯಲ್ಲಿ ಮುಳುಗಿ ಮಹಿಳೆ ಸಾವು - Woman drowns in River Hemavathi

ಚಿಕ್ಕಮಗಳೂರು ಜಿಲ್ಲೆಯ ಹೇಮಾವತಿ ನದಿಯಲ್ಲಿ ಮಹಿಳೆಯೊಬ್ಬರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.

dsd
ಹೇಮಾವತಿ ನದಿಯಲ್ಲಿ ಮುಳುಗಿ ಮಹಿಳೆ ಸಾವು

By

Published : Aug 14, 2020, 8:58 AM IST

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೇಮಾವತಿ ನದಿಯಲ್ಲಿ ಕಡಿದಾಳು ಗ್ರಾಮದ ದೇವಮ್ಮ (55) ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.

ಹೇಮಾವತಿ ನದಿಯಲ್ಲಿ ಮುಳುಗಿ ಮಹಿಳೆ ಸಾವು

ಗದ್ದೆಗೆ ಹೋಗುವಾಗ ಈ ದುರಂತ ನಡೆದಿದ್ದು, ಸುಮಾರು ಎರಡು ಕಿಲೋಮೀಟರ್ ದೂರದಲ್ಲಿ ದೇವಮ್ಮ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಮೂಡಿಗೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಹಾಮಳೆಗೆ ಜಿಲ್ಲೆಯಲ್ಲಿ ಇದು ಆರನೇ ಬಲಿಯಾಗಿದ್ದು, ಧಾರಾಕಾರ ಮಳೆಗೆ ನಾನಾ ಅವಾಂತರಗಳು ಸೃಷ್ಟಿಯಾಗಿವೆ. ಎರಡು ದಿನಗಳಿಂದ ಜಿಲ್ಲೆಯಲ್ಲಿ ವರುಣ ಬಿಡುವು ನೀಡಿದ್ದರೂ ಜಿಲ್ಲೆಯಲ್ಲಿ ನದಿಗಳು ಧುಮ್ಮಿಕ್ಕಿ ಹರಿಯುತ್ತಿವೆ.

ABOUT THE AUTHOR

...view details