ಚಿಕ್ಕಮಗಳೂರು:ತುಂಬು ಗರ್ಭಿಣಿಯೊಬ್ಬರು ಆಸ್ಪತ್ರೆಗೆ ಹೋಗುವಾಗ ಮಾರ್ಗ ಮಧ್ಯೆ ಆಂಬ್ಯುಲೆನ್ಸ್ನಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದಲ್ಲಿ ನಡೆದಿದೆ. ಸುಲ್ತಾನ್ ಪರ್ವೀನ್ ಆಂಬ್ಯುಲೆನ್ಸ್ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ. ಪರ್ವೀನ್ ಸುಲ್ತಾನ್ ಅಸ್ಸೋಂ ಮೂಲದವರಾಗಿದ್ದು, ಕೂಲಿ ಕೆಲಸಕ್ಕಾಗಿ ಮೂಡಿಗೆರೆ ತಾಲೂಕಿನ ಬಾಳೂರು ಎಸ್ಟೇಟ್ಗೆ ಆಗಮಿಸಿದ್ದರು. ತೋಟದ ಲೈನ್ ಮನೆಗಳಲ್ಲಿ ವಾಸವಿದ್ದ ಪರ್ವೀನ್ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು.
ಕೂಡಲೇ ಆಂಬ್ಯುಲೆನ್ಸ್ನಲ್ಲಿ ಆಕೆಯನ್ನು ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯುವಾಗ ಮಾರ್ಗ ಮಧ್ಯೆ ಹೆರಿಗೆಯಾಗಿದೆ. ಆಂಬ್ಯುಲೆನ್ಸ್ ಚಾಲಕ ಆರೀಫ್ ಹಾಗೂ ಮಹಿಳೆಯ ಸಂಬಂಧಿ ಸೇರಿ ಹೆರಿಗೆ ಮಾಡಿಸಿದ್ದಾರೆ. ಡೆಲಿವರಿ ಬಳಿಕ ತಾಯಿ-ಮಗು ಆರೋಗ್ಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಡಿಗೆರೆ ತಾಲೂಕಿನಲ್ಲಿ ಕಳೆದ 10 ದಿನದಲ್ಲಿ ಇದು ಆಂಬ್ಯುಲೆನ್ಸ್ನಲ್ಲಿಯೇ ಹೆರಿಗೆಯಾದ ಮೂರನೇ ಪ್ರಕರಣವಾಗಿದೆ.