ಚಿಕ್ಕಮಗಳೂರು: ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಶವ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ದ್ವಾರಮಕ್ಕಿ ಗ್ರಾಮದಲ್ಲಿ ಪತ್ತೆಯಾಗಿದೆ.
ದ್ವಾರಮಕ್ಕಿ ಗ್ರಾಮದಲ್ಲಿ ಮೃತಪಟ್ಟಿರುವ ಮಹಿಳೆಯನ್ನು ಸುಶೀಲಾ (40) ಎಂದು ಗುರುತಿಸಲಾಗಿದ್ದು, ಪತಿ ಮಂಜುನಾಥ್ ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಓದಿ:ನಾವು ಮುಂಬೈ ಕರ್ನಾಟಕದವರು, ಮುಂಬೈ ನಮ್ಮದು: ಮಹಾ ಸಿಎಂಗೆ ಡಿಸಿಎಂ ಸವದಿ ತಿರುಗೇಟು
ಪದೇ ಪದೆ ಸುಶೀಲಾಗೆ ಹೊಡೆಯುತ್ತಿದ್ದ ಮಂಜುನಾಥ್, ಗಲಾಟೆ ಮಾಡುತ್ತಿದ್ದ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅಲ್ಲದೆ ಆತನನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಬ್ಬಂದಿ ತನಿಖೆ ನಡೆಸುತ್ತಿದ್ದಾರೆ.