ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರು: ಪೊಲೀಸ್ ‌ಠಾಣೆ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ!

ಕೋರ್ಟ್ ಸಮನ್ಸ್ ಹಿಡಿದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ- ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್‌.

Women Suicide Attempt
ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

By

Published : Apr 14, 2023, 1:17 PM IST

ಚಿಕ್ಕಮಗಳೂರು:ಮಹಿಳೆಯೊಬ್ಬರು ಸಮನ್ಸ್ ಹಿಡಿದು ಪೊಲೀಸ್ ಠಾಣೆಯ ಮಹಡಿ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದಿದೆ. ಹಳೇ ಮೂಡಿಗೆರೆ ನಿವಾಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಕೂಡಲೇ ಎಚ್ಚೆತ್ತ ಪೊಲೀಸರು ಮಹಿಳೆಯನ್ನು ರಕ್ಷಿಸಿ ಸಮಾಧಾನ ಮಾಡಿದ್ದಾರೆ. ಮಹಿಳೆಗೆ ಪ್ರಕರಣವೊಂದರಲ್ಲಿ ಕೋರ್ಟ್ ಸಮನ್ಸ್ ಜಾರಿಗೊಳಿಸಿತ್ತು. ಇದರಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ವಿವರ: ಮಹಿಳೆ ಹಾಗೂ ಅವರ ಅಕ್ಕನ ನಡುವೆ ಗಲಾಟೆ ನಡೆದಿತ್ತು. ಈ ಸಂಬಂಧ ಮೂಡಿಗೆರೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ವಿಚಾರಣೆ ವೇಳೆ ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಇವರು ಹಲ್ಲೆ ನಡೆಸಿದ್ದರು. ಇದೇ ವಿಚಾರಕ್ಕೆ 2022 ರಲ್ಲಿ ಮೂಡಿಗೆರೆ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಕಳೆದ ಒಂದು ವರ್ಷದಿಂದ ಮಹಿಳೆ ನ್ಯಾಯಾಲಯಕ್ಕೆ ಹಾಜರಾಗಿರದ ಕಾರಣ ಸಮನ್ಸ್ ಜಾರಿಗೊಳಿಸಲಾಗಿತ್ತು. ಇದೀಗ ಮಹಿಳೆ ಆತ್ಮಹತ್ಯೆಗೆ ಯತ್ನಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.

ಇದನ್ನೂ ಓದಿ:ಆತ್ಮಹತ್ಯೆ ಯತ್ನ: ಒಂದೇ ಕುಟುಂಬದ ಮೂವರು ಸಾವು.. ಪತಿ ಸ್ಥಿತಿ ಗಂಭೀರ

ಮೂವರು ವ್ಯಕ್ತಿಗಳು ಆತ್ಮಹತ್ಯೆಗೆ ಯತ್ನ: ಮುಂಬೈನಲ್ಲಿರುವ ಮಹಾರಾಷ್ಟ್ರ ಸರ್ಕಾರದ ಸಚಿವಾಲಯದ ಮುಂದೆ ಮೂವರು ವ್ಯಕ್ತಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇತ್ತೀಚೆಗೆ ವರದಿಯಾಗಿತ್ತು. ಇದರಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, ಮತ್ತಿಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಇಲ್ಲಿನ ಧೂಳೆ ಎಂಐಡಿಸಿ ಪ್ರದೇಶದ ನಿವಾಸಿ ಶೀತಲ್ ಗಡೇಕರ್ (47) ಮೃತಪಟ್ಟಿದ್ದರು. ಇವರು ಸಚಿವಾಲಯದ ಮುಖ್ಯ ದ್ವಾರದ ಮುಂಭಾಗದಲ್ಲಿ ಕೀಟನಾಶಕ ಸೇವಿಸಿದ್ದರು. ತಕ್ಷಣವೇ ಸರ್ ಜೆಜೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು.

ಶೀತಲ್ ಅವರ ಪತಿ ರವೀಂದ್ರ ಗಡೇಕರ್ ಅವರು ಧೂಳೆ ಎಂಐಡಿಸಿ ಪ್ರದೇಶದ ಹೆಸರಿನಲ್ಲಿ 9 ಗುಂಟೆ ಜಾಗ ಹೊಂದಿದ್ದರು. ಈ ಜಾಗವನ್ನು ನರೇಶ್ ಕುಮಾರ್ ಮನೋಜ್​​ ಎಂಬುವವರಿಗೆ ಗುತ್ತಿಗೆ ನೀಡಿದ್ದರು. ಆದರೆ, 2010ರಲ್ಲಿ ಅಂದಿನ ಎಂಐಡಿಸಿ ಅಧಿಕಾರಿಗಳ ಮೂಲಕ ಮನೋಜ್​, ನಕಲಿ ನೋಟರಿ ಮಾಡಿಸಿಕೊಂಡು ತನ್ನ ಹೆಸರಿಗೆ ಜಮೀನು ಮಾಡಿಕೊಂಡು ವಂಚಿಸಿದ್ದರು ಎಂದು ಆರೋಪಿಸಲಾಗಿದೆ. ಈ ಬಗ್ಗೆ ಮೊಹಾದಿ ಪೊಲೀಸ್ ಠಾಣೆಯಲ್ಲಿ ಶೀತಲ್ ಹಲವು ಬಾರಿ ದೂರು ನೀಡಿದ್ದರು. ಆದರೆ, ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಅಲ್ಲದೇ, ಅಧಿಕಾರಿಗಳಿಗೂ ಮನವಿ ಸಲ್ಲಿಸಿದ್ದರೂ ಯಾವುದೇ ಪರಿಹಾರ ಸಿಕ್ಕಿರಲಿಲ್ಲ. ಹೀಗಾಗಿ ಹತಾಶೆಯಿಂದ ಸಚಿವಾಲಯದ ಎದುರು ಕ್ರಿಮಿನಾಶಕ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಂತರ ಪೊಲೀಸರು ಶೀತಲ್‌ರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದರು. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಮುಂಬೈ: ಸಚಿವಾಲಯದ ಮುಂದೆ ಇಬ್ಬರು ಮಹಿಳೆಯರು, ಓರ್ವ ದಿವ್ಯಾಂಗ ವ್ಯಕ್ತಿಯಿಂದ ಆತ್ಮಹತ್ಯೆ ಯತ್ನ

ABOUT THE AUTHOR

...view details