ಕರ್ನಾಟಕ

karnataka

ETV Bharat / state

KSRTC ಬಸ್ ನಿಲ್ದಾಣದ ಆವರಣದಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ.. video - ಮೂಡಿಗೆರೆ KSRTC ಬಸ್ ನಿಲ್ದಾಣದ ಆವರಣದಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಓರ್ವನಿಗೆ ಗಂಭೀರ ಗಾಯವಾಗಿದೆ..

ಎರಡು ಗುಂಪುಗಳ ನಡುವೆ ಮಾರಾಮಾರಿ
ಎರಡು ಗುಂಪುಗಳ ನಡುವೆ ಮಾರಾಮಾರಿ

By

Published : Nov 14, 2021, 4:06 PM IST

ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಒಳಭಾಗದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಈ ಘಟನೆಯಲ್ಲಿ ಓರ್ವ ಯುವಕನ ತಲೆಗೆ ಗಂಭೀರ ಗಾಯವಾಗಿದೆ. ಆತನನ್ನ ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಎರಡು ಗುಂಪುಗಳ ನಡುವೆ ಮಾರಾಮಾರಿ

ಈ ಘಟನೆಯಿಂದ ಬಸ್ ಸ್ಟ್ಯಾಂಡ್‌ನಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು. ಬಸ್ ಸ್ಟ್ಯಾಂಡ್‌ನಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದರೂ ಅವುಗಳು ಕೆಟ್ಟು ಹೋಗಿವೆ.

ಇದರಿಂದ ಬಸ್​ ನಿಲ್ದಾಣದಲ್ಲಿ ಪುಂಡ ಪೋಕರಿಗಳ ಹಾವಳಿ ಹೆಚ್ಚಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮೂಡಿಗೆರೆ ಪೊಲೀಸರು ಈ ಘಟನೆಗೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಿದ್ದಾರೆ.

ವಿಧ್ಯಾರ್ಥಿನಿಯರಿಗೆ ಮತ್ತು ಮಹಿಳೆಯರಿಗೆ ಭದ್ರತೆ ಮರೀಚಿಕೆಯಾಗಿದೆ. ದೊಡ್ಡ ಅನಾಹುತ ನಡೆಯುವ ಮುನ್ನ ಸಿಸಿ ಟಿವಿ ಕ್ಯಾಮೆರಾವನ್ನು ದುರಸ್ಥಿಗೊಳಿಸಿ, ಬಸ್ ನಿಲ್ದಾಣಕ್ಕೆ ಸೂಕ್ತ ಭದ್ರತೆ ಒದಗಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಮೂಡಿಗೆರೆ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

ABOUT THE AUTHOR

...view details