ಚಿತ್ರದುರ್ಗ: ಜಿಲ್ಲೆಯಲ್ಲಿ ಸೋಂಕಿಗೆ ಸಂಬಂಧಿಸಿದಂತೆ ಒಟ್ಟು 104 ಜನರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಎಲ್ಲಾ ವರದಿಗಳು ನೆಗೆಟಿವ್ ಬಂದಿದೆ. ಇನ್ನೂ 02 ಜನರ ವರದಿ ಬರುವುದು ಬಾಕಿ ಇದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪಾಲಾಕ್ಷ ತಿಳಿಸಿದರು.
ಜಿಲ್ಲೆಯಲ್ಲಿ 104 ಶಂಕಾಸ್ಪದ ವ್ಯಕ್ತಿಗಳ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ ಎಲ್ಲಾ 104 ಜನರ ಪ್ರಯೋಗಾಲಯ ವರದಿ ನೆಗೆಟಿವ್ ಬಂದಿದೆ. ಇನ್ನೂ 02 ಜನರ ವರದಿ ಬರುವುದು ಬಾಕಿ ಇದೆ. ಸದ್ಯ ಜಿಲ್ಲೆಯಲ್ಲಿ 2149 ಜನ ಹೋಂ ಕ್ವಾರಂಟೈನ್‍ನಲ್ಲಿದ್ದಾರೆ ಎಂದರು.