ಚಿತ್ರದುರ್ಗ: ಜಿಲ್ಲೆಯಲ್ಲಿ ಇಷ್ಟು ದಿನ ಸೋಂಕಿನ ಪ್ರಮಾಣ ಕಡಿಮೆ ಇದ್ದು, ಇದೀಗ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದ್ದರಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ.
ಚಿತ್ರದುರ್ಗದಲ್ಲಿ ಒಂದೇ ದಿನ 12 ಕೊರೊನಾ ಸೋಂಕು ಪತ್ತೆ! - ಕೋವಿಡ್ 19
ಕೆಲ ದಿನಗಳ ಹಿಂದೆಯಷ್ಟೇ ಸೋಂಕು ಮುಕ್ತ ಜಿಲ್ಲೆ ಎಂಬ ಹಣೆಪಟ್ಟಿ ಹೊಂದಿದ್ದ ಚಿತ್ರದುರ್ಗದಲ್ಲಿ ಒಂದೇ ದಿನ 12 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದು ಜನತೆಯಲ್ಲಿ ಆತಂಕವನ್ನು ತಂದಿದೆ.
ಕೆಲ ದಿನಗಳ ಹಿಂದೆಯಷ್ಟೇ ಸೋಂಕು ಮುಕ್ತ ಜಿಲ್ಲೆ ಎಂಬ ಹಣೆಪಟ್ಟಿ ಹೊಂದಿದ್ದ ಚಿತ್ರದುರ್ಗದಲ್ಲಿ ಒಂದೇ ದಿನ 12 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದು ಜನತೆಯಲ್ಲಿ ಆತಂಕವನ್ನು ತಂದಿದೆ. ಜಿಲ್ಲೆಯ ಹಿರಿಯೂರು ಕೊರೊನಾ ಹಾಟ್ಸ್ಪಾಟ್ ಆಗಿ ಮಾರ್ಪಾಡು ಆಗುತ್ತಿರುವುದು ಜಿಲ್ಲಾಡಳಿತಕ್ಕೆ ತಲೆನೋವಾಗಿದೆ.
ಕಳೆದ 24 ಗಂಟೆಗಳಲ್ಲಿ ಕಂಡುಬಂದ 12 ಜನ ಸೋಂಕಿತರಲ್ಲಿ 3 ಮಹಿಳೆಯರು ಸೇರಿ 09 ಪುರುಷರಿದ್ದಾರೆ. ಈ 12 ಪ್ರಕರಣಗಳ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 74ಕ್ಕೆ ಏರಿಕೆಯಾಗಿದೆ. ಕೆಲವರಿಗೆ ಅಂತರ ಜಿಲ್ಲಾ ಪ್ರಯಾಣದಿಂದ ಸೋಂಕು ತಗುಲಿದೆ. ಕೆಲವರಿಗೆ ಸೋಂಕು ತಟ್ಟಿದ ಮೂಲ ಪತ್ತೆಯಾಗುತ್ತಿಲ್ಲ. ಆರೋಗ್ಯ ಅಧಿಕಾರಿಗಳು ಸೋಂಕಿತರ ಮೂಲ ಪತ್ತೆಗೆ ಮುಂದಾಗಿದ್ದಾರೆ.