ಚಿತ್ರದುರ್ಗ:ಬೆಂಗಳೂರು ಹಾಗೂ ಇತರೆ ಜಿಲ್ಲೆಗಳಿಗೆ ಮಾರಣಾಂತಿಕ ಕೊರೊನಾ ವೈರಸ್ ಕಾಲಿಟ್ಟ ಪರಿಣಾಮ ಚಿತ್ರದುರ್ಗದಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ.
ಕೊರೊನಾ ವೈರಸ್ ಮುನ್ನೆಚ್ಚರಿಕೆ ಕ್ರಮ: ಚಿತ್ರದುರ್ಗದಲ್ಲಿ ನಿಷೇಧಾಜ್ಞೆ - 144 Section enforcement in Chitradurga
ಕೊರೊನಾ ವೈರಸ್ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ವೈರಸ್ ಹರಡದಂತೆ ಚಿತ್ರದುರ್ಗ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ.
ಕೊರೊನಾ ವೈರಸ್ ಹರಡದಂತೆ ಚಿತ್ರದುರ್ಗದಲ್ಲಿ ನಿಷೇಧಾಜ್ಞೆ ಜಾರಿ
ಕೊರೊನಾ ವೈರಸ್ ಹರಡುವಿಕೆ ತಡೆಗಟ್ಟಲು ಈ ಕ್ರಮ ತೆಗೆದುಕೊಂಡಿರುವುದಾಗಿ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ತಿಳಿಸಿದ್ದಾರೆ.
ಅಂತ್ಯಕ್ರಿಯೆ, ವೈದ್ಯಕೀಯ ಪರೀಕ್ಷೆ ಹೊರತುಪಡಿಸಿ ಜಾತ್ರೆ, ಉರುಸ್, ಸಂತೆ, ಶಾಪಿಂಗ್ ಮಾಲ್ಗಳನ್ನು ತೆರೆಯದಂತೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ನಿಯಮ ಮೀರಿ ಕಾರ್ಯಕ್ರಮಗಳನ್ನು ನೆರವೇರಿಸಲು ಮುಂದಾದಲ್ಲಿ ಕಾನೂನು ಕ್ರಮ ಜರಗಿಸುವುದಾಗಿ ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.