ಚಿತ್ರದುರ್ಗ:ಕೊರೊನಾ ವೈರಸ್ ಮಹಾಮಾರಿಯಿಂದ ಕಂಗೆಟ್ಟು ಜಿಲ್ಲೆಯಾದ್ಯಂತ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ 144 ಸೆಕ್ಷನ್ ಜಾರಿ ಮಾಡಿದ್ದಾರೆ. ಆದರೆ ನಿಷೇಧಾಜ್ಞೆಯನ್ನು ಲೆಕ್ಕಿಸದೇ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದ್ದಾರೆ.
ಕೋಟೆನಾಡಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಕಾಂಗ್ರೆಸ್ ಕಾರ್ಯಕರ್ತರಿಂದ ಧರಣಿ..!
ಹಾಜಿ ಶಫೀವುಲ್ಲಾ ಎಂಬವರು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸ್ಥಾನದಿಂದ ಶಿವು ಯಾದವ್ರನ್ನು ವಜಾಗೊಳಿಸಿದ್ದಕ್ಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ,ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿದ ಘಟನೆ ನಡೆಯಿತು. ಆದರೆ, ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯಿದ್ದರೂ ಕಾರ್ಯಕರ್ತರು ಧರಣಿ ನಡೆಸಿದ್ದಾರೆ.
ಕೋಟೆನಾಡಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಕಾಂಗ್ರೆಸ್ ಕಾರ್ಯಕರ್ತರಿಂದ ಧರಣಿ
ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸ್ಥಾನದಿಂದ ಶಿವು ಯಾದವ್ರನ್ನು ವಜಾಗೊಳಿಸಿದ್ದಕ್ಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ,ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿದರು.
ಹಾಜಿ ಶಫೀವುಲ್ಲಾ ಅವರ ಆದೇಶವನ್ನು ಹಿಂಪಡೆಯುವಂತೆ ಕೈ ಕಾರ್ಯಕರ್ತರು ಒತ್ತಾಯಿಸಿದರು. ಸರ್ಕಾರಿ ಆದೇಶವನ್ನು ಗಾಳಿಗೆ ತೂರಿರುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಸಾರ್ವಜನಿಕರು ಗರಂ ಆಗಿದ್ದಾರೆ.