ಭೀಕರ ರಸ್ತೆ ಅಪಘಾತ : ಸ್ಥಳದಲ್ಲೇ ಐವರು ಸಾವು, 7 ಮಂದಿಗೆ ಗಾಯ - road accident
![ಭೀಕರ ರಸ್ತೆ ಅಪಘಾತ : ಸ್ಥಳದಲ್ಲೇ ಐವರು ಸಾವು, 7 ಮಂದಿಗೆ ಗಾಯ ಭೀಕರ ರಸ್ತೆ ಅಪಘಾತ](https://etvbharatimages.akamaized.net/etvbharat/prod-images/768-512-10020454-thumbnail-3x2-lek.jpg)
06:41 December 27
ಬಸ್ - ಕ್ರೂಸರ್ ಮುಖಾಮುಖಿ ಡಿಕ್ಕಿಯಾದ ಹಿನ್ನೆಲೆ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 7 ಮಂದಿ ಗಾಯಗೊಂಡ ಘಟನೆ ಮೊಳಕಾಲ್ಮೂರು ತಾಲೂಕಿನ ಬಿ.ಜಿ.ಕೆರೆ ಗ್ರಾಮದ ಬಳಿ ನಡೆದಿದೆ.
ಚಿತ್ರದುರ್ಗ: ಬಸ್ ಮತ್ತು ಕ್ರೂಸರ್ ಮುಖಾಮುಖಿ ಡಿಕ್ಕಿಯಾದ ಹಿನ್ನೆಲೆ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಿ.ಜಿ.ಕೆರೆ ಗ್ರಾಮದ ಬಳಿ ನಡೆದಿದೆ.
ತಿಮ್ಮಣ್ಣ (40), ರತ್ನಮ್ನ (38), ಮಹೇಶ್ (19), ದುರ್ಗಪ್ಪ (16) ಮತ್ತು 55 ವರ್ಷದ ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲಿಂಗಸುಗೂರಿನಿಂದ ಬೆಂಗಳೂರಿಗೆ ಕ್ರೂಸರ್ ತೆರಳುತ್ತಿದ್ದ ವೇಳೆ ಬೆಂಗಳೂರಿನಿಂದ ಲಿಂಗಸುಗೂರಿನತ್ತ ಬರುತ್ತಿದ್ದ ಬಸ್ಗೆ ಡಿಕ್ಕಿಯಾಗಿದೆ. ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 7 ಮಂದಿ ಗಾಯಗೊಂಡಿದ್ದು, ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಕುರಿತು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.