ಚಿತ್ರದುರ್ಗ: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಸಾವಿರ ಗಡಿ ದಾಟಿದ್ದು, ಇಂದು 71 ಜನರಿಗೆ ಸೋಂಕು ತಗುಲಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1283ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ; ಇಂದು 86 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆ - corona news
ಚಿತ್ರದುರ್ಗದಲ್ಲಿ ಇಂದು 71 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1283ಕ್ಕೆ ಏರಿಕೆಯಾಗಿದೆ. ಒಟ್ಟು 18 ಜನ ಸೋಂಕಿಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 663 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.
ಕೋವಿಡ್-19 ಆಸ್ಪತ್ರೆ
ಜಿಲ್ಲೆಯ ಹಲವೆಡೆ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 86 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಚಿತ್ರದುರ್ಗ ತಾಲೂಕಿನಲ್ಲಿ 09, ಹೊಳಲ್ಕೆರೆ-18, ಹಿರಿಯೂರು-10, ಚಳ್ಳಕೆರೆ-11, ಹೊಸದುರ್ಗ-13 ಹಾಗೂ ಮೊಳಕಾಲ್ಮೂರಿನಲ್ಲಿ 09 ಹಾಗೂ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ 01 ಪ್ರಕರಣ ಸೇರಿದಂತೆ ಒಟ್ಟು 71 ಕೊರೊನಾ ಪ್ರಕರಣಗಳು ದೃಢಪಟ್ಟಿವೆ.
ಒಟ್ಟು 18 ಜನ ಸೋಂಕಿಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 663 ಜನರು ಗುಣಮುಖರಾಗಿ ಬಿಡುಗಡೆಹೊಂದಿದ್ದು, ಸದ್ಯ 602 ಸಕ್ರಿಯ ಪ್ರಕರಣಗಳು ಇವೆ.