ಚಿತ್ರದುರ್ಗ: ಜಿಲ್ಲೆಯಲ್ಲಿಂದು 8 ಜನರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ, ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ನಲ್ಲಿ 8 ಮಂದಿಗೆ ಕೊರೊನಾ ತಗುಲಿರುವುದು ಖಾತ್ರಿಯಾಗಿದೆ.
ಚಿತ್ರದುರ್ಗದ 8 ಜನರಲ್ಲಿ ಕೊರೊನಾ ಸೋಂಕು ಪತ್ತೆ - Chitradurga Kovid Care Center
ಕೋಟೆನಾಡು ಚಿತ್ರದುರ್ಗದಲ್ಲಿ 8 ಜನರಿಗೆ ಕೊರೊನಾ ದೃಢವಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 120ಕ್ಕೆ ಏರಿಕೆಯಾಗಿದೆ. ಅಲ್ಲದೆ ಜಿಲ್ಲೆಯಲ್ಲಿ ಕೊರೊನಾದಿಂದಾಗಿ ಒಬ್ಬರು ಮೃತಪಟ್ಟಿದ್ದಾರೆ.
ಚಿತ್ರದುರ್ಗದ 47 ವರ್ಷದ ಪುರುಷ, 45 ವರ್ಷದ ಪುರುಷ, 29 ವರ್ಷದ ಪುರುಷ, 60 ವರ್ಷದ ಮಹಿಳೆ, 80 ವರ್ಷದ ವೃದ್ಧೆ ಹಾಗೂ 52 ವರ್ಷದ ಮಹಿಳೆ, ಹಿರಿಯೂರಿನ 31 ವರ್ಷದ ಮಹಿಳೆ, ಮತ್ತು ಚಳ್ಳಕೆರೆಯ 65 ವರ್ಷದ ಪುರುಷ ಸೇರಿ ಒಟ್ಟು 8 ಜನರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿರುವುದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 120ಕ್ಕೆ ಏರಿಕೆಯಾಗಿದೆ.
120 ಜನರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇದರಲ್ಲಿ 8 ಜನರಿಗೆ ಕೊರೊನಾ ಇರುವುದು ದೃಢವಾಗಿದೆ. ಇನ್ನು ಜಿಲ್ಲೆಯಲ್ಲಿ 83 ಜನ ಗುಣಮುಖರಾಗಿದ್ದು, ಇನ್ನುಳಿದ 36 ಜನ ಕೋವಿಡ್ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.