ಚಿತ್ರದುರ್ಗ:ಜಿಲ್ಲೆಯಲ್ಲಿಂದು 84 ಮಂದಿಗೆ ಮಹಾಮಾರಿ ಕೊರೊನಾ ಸೋಂಕು ತಗುಲಿರುವುದು ದೃಢಪಡುವ ಮೂಲಕ ಸೋಂಕಿತರ ಸಂಖ್ಯೆ 11,892ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ: 84 ಮಂದಿಗೆ ಕೊರೊನಾ ಸೋಂಕು ದೃಢ
84 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಡುವ ಮೂಲಕ ಸೋಂಕಿತರ ಸಂಖ್ಯೆ 11,892ಕ್ಕೆ ಏರಿಕೆಯಾಗಿದೆ.
1,700 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷಿಸಲಾಗಿದ್ದು, ವರದಿಯಲ್ಲಿ 84 ಜನರಿಗೆ ಸೋಂಕು ತಗುಲಿರುವುದು ಗೊತ್ತಾಗಿದೆ. ಇನ್ನು ಕೋವಿಡ್‍ಗೆ ಜಿಲ್ಲೆಯ ಹಲವು ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿ 111 ಜನರು ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 11,120 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
56 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಸದ್ಯ 715 ಸಕ್ರಿಯ ಪ್ರಕರಣಗಳು ಇವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 90,810 ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.