ಚಿತ್ರದುರ್ಗ: ಜಿಲ್ಲೆಯಲ್ಲಿಂದು 92 ಜನರಿಗೆ ಕೊರೊನಾ ಸೋಂಕು ದೃಢಪಡುವ ಮೂಲಕ ಸೋಂಕಿತರ ಸಂಖ್ಯೆ 2,423ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗದ 92 ಮಂದಿಗೆ ಕೊರೊನಾ ದೃಢ, ಸೋಂಕಿತರ ಸಂಖ್ಯೆ 2,423ಕ್ಕೆ ಏರಿಕೆ - Chitradurga corona case
92 ಕೊರೊನಾ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 2,423ಕ್ಕೆ ಏರಿಕೆಯಾಗಿದೆ. ಈ ಪೈಕಿ 1,659 ಜನರು ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ.
Chitradurga corona cases
ಚಿತ್ರದುರ್ಗ-35, ಹೊಸದುರ್ಗ-12 ಹಿರಿಯೂರು-11, ಹೊಳಲ್ಕೆರೆ-19, ಮೊಳಕಾಲ್ಮೂರು-03, ಚಳ್ಳಕೆರೆ-12 ಸೋಂಕು ಪ್ರಕರಣಗಳು ಪತ್ತೆಯಾಗಿದೆ.
97 ಮಂದಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಒಟ್ಟು 2,423 ಪ್ರಕರಣಗಳ ಪೈಕಿ 1,659 ಜನರು ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಈವರೆಗೆ 34 ಜನರು ಕೊನೆಯುಸಿರೆಳೆದಿದ್ದಾರೆ. ಸದ್ಯ 730 ಸೋಂಕಿತರಿಗೆ ಚಿಕಿತ್ಸೆ ಮುಂದುವರೆದಿದೆ.