ಚಿತ್ರದುರ್ಗ: ಜಿಲ್ಲೆಯಲ್ಲಿ 95 ಜನರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3,458ಕ್ಕೆ ಏರಿಕೆಯಾದಂತಾಗಿದೆ.
ಚಿತ್ರದುರ್ಗ ತಾಲೂಕಿನಲ್ಲಿ -14, ಹಿರಿಯೂರು- 08, ಚಳ್ಳಕೆರೆ-28, ಮೊಳಕಾಲ್ಮುರು 07, ಹೊಸದುರ್ಗ 32 ಹಾಗೂ ಹೊಳಲ್ಕೆರೆ ತಾಲೂಕಿನಲ್ಲಿ 06 ಸೇರಿದಂತೆ ಒಟ್ಟು 95 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯಲ್ಲಿ ಹಲವೆಡೆ ಕೋವಿಡ್ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 72 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.1,974 ಜನರು ಗುಣಮುಖರಾಗಿದಂತಾಗಿದೆ.
ಇದುವರೆಗೆ 35 ಜನ ಕೋವಿಡ್ನಿಂದ ಮೃತಪಟ್ಟಿದ್ದು,ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಸದ್ಯ 1,449 ಸಕ್ರಿಯ ಪ್ರಕರಣಗಳಿವೆ.