ಕರ್ನಾಟಕ

karnataka

ETV Bharat / state

ಚಿತ್ರದುರ್ಗ: ಮಹಾಮಾರಿ ಕೊರೊನಾ ಹಿಮ್ಮೆಟ್ಟಿಸಿದ 96 ವರ್ಷದ ವೃದ್ಧೆ...! - covid news update

ಮಹಾಮಾರಿ ಕೊರೊನಾ ಸೋಂಕಿಗೆ ಇಡೀ ಜಗತ್ತೇ ತಲ್ಲಣಗೊಂಡಿರುವ ಈ ಸಮಯದಲ್ಲಿ ಭಯಭೀತವಾಗಿರುವ ಜನರಿಗೆ ಧೈರ್ಯ ತುಂಬುವ ರೀತಿಯಲ್ಲಿ 96 ವರ್ಷದ ವೃದ್ಧೆಯೊಬ್ಬರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.

96 year old women cured by covid 19 virus in chitradurga
ಮಹಾಮಾರಿಯನ್ನೇ ಹಿಮ್ಮೆಟ್ಟಿದ 96 ವರ್ಷದ ವೃದ್ಧೆ

By

Published : Jul 7, 2020, 1:07 PM IST

ಚಿತ್ರದುರ್ಗ:ಜಿಲ್ಲೆಯ ಹಿರಿಯೂರಿನ 96 ವರ್ಷದ ವೃದ್ಧೆಯೊಬ್ಬರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಕೋವಿಡ್​​ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.

ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ವೃದ್ಧೆಯಲ್ಲಿ ಸೋಂಕಿನ ಲಕ್ಷಣಗಳು ಕಂಡು ಬಂದಿದ್ದವು. ಹೀಗಾಗಿ ಜೂನ್​ 25ರಂದು ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್​ ಪರೀಕ್ಷೆಗೆ ಒಳಗಾಗಿದ್ದರು. ಮರುದಿನ ಕೊರೊನಾ ದೃಢಪಟ್ಟಿತ್ತು.

ಇದೀಗ ವೃದ್ಧೆ ಗುಣಮುಖರಾಗಿದ್ದು, ಕೊರೊನಾ ಸೋಂಕಿನಿಂದ ಗುಣಮುಖರಾದ ರಾಜ್ಯದ ಎರಡನೇ ಅತೀ ಹಿರಿಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ABOUT THE AUTHOR

...view details