ಕರ್ನಾಟಕ

karnataka

ETV Bharat / state

ಬಾಲಕಿ ಮೇಲಿನ ಅತ್ಯಾಚಾರ ಸಾಬೀತು: ಕಾಮುಕನಿಗೆ 20ವರ್ಷ ಕಠಿಣ ಶಿಕ್ಷೆ ವಿಧಿಸಿದ ಚಿತ್ರದುರ್ಗ ಕೋರ್ಟ್​ - ಚಿತ್ರದುರ್ಗ ಸುದ್ದಿ

ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಆರೋಪ ಸಾಬೀತಾಗಿದ್ದು ಎರಡನೇ ಅಪರ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಬನ್ನಿಕಟ್ಟಿ ಹನುಮಂತಪ್ಪ ಅವರು ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 60 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

a-rapist-is-sentenced-to-20-years-and-a-fine-of-rs-60
a-rapist-is-sentenced-to-20-years-and-a-fine-of-rs-60

By

Published : Jan 24, 2020, 6:44 PM IST

ಚಿತ್ರದುರ್ಗ: ಬಾಲಕಿ ಮೇಲಿನ ಅತ್ಯಾಚಾರ ಸಾಬೀತಾದ ಹಿನ್ನೆಲೆ ಕಾಮುಕನಿಗೆಎರಡನೇ ಅಪರ ಜಿಲ್ಲಾ ನ್ಯಾಯಾಲಯವುತಕ್ಕ ಶಿಕ್ಷೆ ವಿಧಿಸಿದೆ.

ನ್ಯಾಯಧೀಶರಾದ ಬನ್ನಿಕಟ್ಟಿ ಹನುಮಂತಪ್ಪ ಅವರು ತಪ್ಪಿತಸ್ಥನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 60 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ. ಅದರಲ್ಲಿ 40 ರೂ.ಯನ್ನು ಸಂತ್ರಸ್ತೆಗೆ ನೀಡುವಂತೆ ಆದೇಶಿಸಲಾಯಿತು.

ಪ್ರಕರಣ ಹಿನ್ನಲೆ: ಹಿರಿಯೂರು ತಾಲೂಕಿನ ಮೇಟಿಕುರ್ಕಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 15 ವರ್ಷದ ಬಾಲಕಿ ಮೇಲೆ ಬಲವಂತವಾಗಿ ಲೈಂಗಿಕ ಕಿರುಕುಳ ನೀಡಿ ಆಕೆಯನ್ನು ಅದೇ ಗ್ರಾಮದ ಕಾಮುಕ ತಿಮ್ಮಾರಾಜು ಎಂಬಾತ ಗರ್ಭಿಣಿಯನ್ನಾಗಿಸಿದ್ದ. ಈ ಕುರಿತು ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ABOUT THE AUTHOR

...view details