ಚಿತ್ರದುರ್ಗ: ಮೂರು ಲಾರಿಗಳ ನಡುವೆ ಸರಣಿ ಅಪಘಾತ ಸಂಭವಿಸಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಚಿಕ್ಕಗೊಂಡನಹಳ್ಳಿ ಬಳಿ ನಡೆದಿದೆ.
ಲಾರಿಗಳ ಮಧ್ಯೆ ಸರಣಿ ಅಪಘಾತ: ಓರ್ವ ಸ್ಥಳದಲ್ಲೇ ಸಾವು - series accident between lorries one died
ಮೂರು ಲಾರಿಗಳ ನಡುವೆ ಸರಣಿ ಅಪಘಾತ ಸಂಭವಿಸಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಚಿಕ್ಕಗೊಂಡನಹಳ್ಳಿ ಬಳಿ ನಡೆದಿದೆ.
ಲಾರಿಗಳ ಮಧ್ಯೆ ಸರಣಿ ಅಪಘಾತ
ಈರುಳ್ಳಿ ಸಾಗಿಸುತ್ತಿದ್ದ ಲಾರಿಯಲ್ಲಿದ್ದ ಏಳು ಮಂದಿಗೆ ಗಾಯಾಳುಗಳಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದಲ್ಲಿ ಸಾವನ್ನಪ್ಪಿರುವ ಲಾರಿ ಚಾಲಕನ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಇನ್ನು ಅಪಘಾತವಾದ ಲಾರಿಗಳು ಬೆಂಗಳೂರಿನಿಂದ ಹರಿಯಾಣ ಕಡೆಗೆ ಹಾಗೂ ಹೊಸಪೇಟೆಯಿಂದ ಬೆಂಗಳೂರು ಮಾರ್ಗವಾಗಿ ತೆರಳುತ್ತಿರುವಾಗ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ತುರುವನೂರು ಪೊಲೀಸ್ ಠಾಣೆಯ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.