ಕರ್ನಾಟಕ

karnataka

ETV Bharat / state

ಚಳ್ಳಕೆರೆ ಬಳಿ ಬಸ್​ - ಲಾರಿ ಮಧ್ಯೆ ಭೀಕರ ರಸ್ತೆ ಅಪಘಾತ: ಮೂವರ ದುರ್ಮರಣ

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಳಿಯ ಶ್ರೀರಂಗಪಟ್ಟಣ ಬೀದರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಹಾಗೂ ಕೆಎಸ್​ಆರ್​ಟಿಸಿ ಬಸ್​ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ

By

Published : Oct 5, 2019, 9:17 AM IST

Updated : Oct 5, 2019, 10:24 AM IST

ಚಿತ್ರದುರ್ಗ: ಕೆಎಸ್ಆರ್​ಟಿಸಿ ಬಸ್ ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನಪ್ಪಿದ್ದು, ಕೆಲವರು ಗಾಯಗೊಂಡ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಳಿ ಇರುವ ಶ್ರೀರಂಗಪಟ್ಟಣ ಬೀದರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ

ಬೆಂಗಳೂರಿಂದ ಬಳ್ಳಾರಿ ಕಡೆಗೆ ಸಂಚರಿಸುತ್ತಿದ್ದ ಬಸ್​ಗೆ ಲಾರಿ ಡಿಕ್ಕಿ ಹೊಡೆದಿದೆ. ಬಸ್ ಚಾಲಕ ಪವನ್, ಪ್ರಯಾಣಿಕ ವಿಜಯಕುಮಾರ್ ಸೇರಿದ್ದಂತೆ ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಮಹಿಳೆಯ ಹೆಸರು ತಿಳಿದು ಬಂದಿಲ್ಲ.

ಗಾಯಾಳುಗಳನ್ನು ಹತ್ತಿರದ ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದು, ಚಳ್ಳಕೆರೆ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Last Updated : Oct 5, 2019, 10:24 AM IST

ABOUT THE AUTHOR

...view details