ಚಿತ್ರದುರ್ಗ: ಈಜಲು ಹೋಗಿ ವೇದಾವತಿ ನದಿಯಲ್ಲಿ ಕಾಲು ಜಾರಿ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗುಳ್ಯ ಗ್ರಾಮದ ರವಿ (22) ಈಜಲು ತೆರಳಿ ಮೃತಪಟ್ಟವ ಎನ್ನಲಾಗಿದೆ.
ವೇದಾವತಿ ನದಿಯಲ್ಲಿ ಕಾಲು ಜಾರಿ ಬಿದ್ದು ಯುವಕ ಸಾವು - young man drowns in river
ವೇದಾವತಿ ನದಿಯಲ್ಲಿ ಕಾಲು ಜಾರಿ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಮಗನನ್ನು ಕಳೆದುಕೊಂಡ ಪೋಷಕರು ಹಾಗೂ ಕುಟುಂಬದವರ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ.
ವೇದಾವತಿ ನದಿಯಲ್ಲಿ ಕಾಲು ಜಾರಿ ಬಿದ್ದು ಯುವಕ ಸಾವು
ಚಳ್ಳಕೆರೆ ತಾಲೂಕಿನ ಕಲಮರಹಳ್ಳಿ-ಹೊಸಹಳ್ಳಿ ಬಳಿ ಇರುವ ವೇದಾವತಿ ನದಿ ತಟದಲ್ಲಿ ಘಟನೆ ನಡೆದಿದ್ದು, ಅಬ್ಬಿನಹೊಳೆ ಪೊಲೀಸ್ ಠಾಣೆಯ ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನು ಮಗನನ್ನು ಕಳೆದುಕೊಂಡ ಪೋಷಕರು ಹಾಗೂ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.