ಚಿತ್ರದುರ್ಗ:ಜಿಲ್ಲೆಯ ಮೊಳಕಾಲ್ಮೂರು ತಹಶೀಲ್ದಾರ್ & ಕಂದಾಯ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಮೊಳಕಾಲ್ಮೂರು ತಹಶೀಲ್ದಾರ್ ಮತ್ತು ಕಂದಾಯ ಅಧಿಕಾರಿ ಎಸಿಬಿ ಬಲೆಗೆ - ACB attacked on Tahsildar
ಎಸಿಬಿ ಎಸ್ಪಿ ಜಯಪ್ರಕಾಶ್ ನೇತೃತ್ವದಲ್ಲಿ ಮೊಳಕಾಲ್ಮೂರು ತಹಶೀಲ್ದಾರ್ ಕಚೇರಿ ಮೇಲೆ ದಾಳಿ ನಡೆಸಲಾಗಿದ್ದು, ಮೊಳಕಾಲ್ಮೂರು ತಹಶೀಲ್ದಾರ್ ಮಲ್ಲಿಕಾರ್ಜುನ ಹಾಗೂ ಆರ್ಐ ಉಮೇಶ್ ಅವರನ್ನು ಎಸಿಬಿ ಅಧಿಕಾರಿಗಳು ಹಣದ ಸಮೇತ ವಶಕ್ಕೆ ಪಡೆದಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸಿಬಿ ದಾಳಿ ನಡೆದ ಬೆನ್ನಲ್ಲೇ ಲಂಚ ಸ್ವೀಕರಿಸುವ ವೇಳೆ ಬಲೆಗೆ ಬಿದ್ದಿದ್ದಾರೆ. ಎಸಿಬಿ ಎಸ್ಪಿ ಜಯಪ್ರಕಾಶ್ ನೇತೃತ್ವದಲ್ಲಿ ಮೊಳಕಾಲ್ಮೂರು ತಹಶೀಲ್ದಾರ್ ಕಚೇರಿ ಮೇಲೆ ದಾಳಿ ನಡೆಸಲಾಗಿದ್ದು, ಮೊಳಕಾಲ್ಮೂರು ತಹಶೀಲ್ದಾರ್ ಮಲ್ಲಿಕಾರ್ಜುನ ಹಾಗೂ ಆರ್ಐ ಉಮೇಶ್ ಅವರನ್ನು ಎಸಿಬಿ ಅಧಿಕಾರಿಗಳು ಹಣದ ಸಮೇತ ವಶಕ್ಕೆ ಪಡೆದಿದ್ದಾರೆ.
ಗುತ್ತಿಗೆದಾರ ಪ್ರೀತಮ್ ಎಂಬುವರ ಬಳಿ ಲಂಚಕ್ಕೆ ಬೇಡಿಕೆಯಿಟ್ಟಿದ್ದು, ಅವರ ಬಳಿ 2 ಲಕ್ಷ ರೂ. ಲಂಚ ಸ್ವೀಕರಿಸುವ ವೇಳೆಯೇ ದಾಳಿ ನಡೆಸಲಾಗಿದೆ. ಇಬ್ಬರನ್ನೂ ವಶಕ್ಕೆ ಪಡೆಯಲಾಗಿದೆ ಎಂದು ಎಸಿಬಿ ಎಸ್ಪಿ ಜಯಪ್ರಕಾಶ್ ತಿಳಿಸಿದ್ದಾರೆ.