ಚಿತ್ರದುರ್ಗ:ತಾಲೂಕಿನ ಕುಂಚಿಗನಾಳ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದ ಖಾಸಗಿ ಬಸ್ ಪಲ್ಟಿಯಾಗಿದೆ.
ಖಾಸಗಿ ಬಸ್ ಪಲ್ಟಿ, 10 ಜನರಿಗೆ ಗಾಯ...ತಪ್ಪಿದ ಅನಾಹುತ... - ಚಿತ್ರದುರ್ಗ ತಾಲೂಕಿನ ಕುಂಚಿಗನಾಳ ಗ್ರಾಮದ ಬಳಿ ಖಾಸಗಿ ಬಸ್ ಪಲ್ಟಿ
ಚಿತ್ರದುರ್ಗ ತಾಲೂಕಿನ ಕುಂಚಿಗನಾಳ ಗ್ರಾಮದ ಬಳಿ ಖಾಸಗಿ ಬಸ್ ಪಲ್ಟಿಯಾಗಿದ್ದು, ಭಾರಿ ಅನಾಹುತ ತಪ್ಪಿರುವ ಘಟನೆ ನಡೆದಿದೆ.
ಖಾಸಗಿ ಬಸ್ ಪಲ್ಟಿ, 10 ಜನರಿಗೆ ಗಾಯ...ತಪ್ಪಿದ ಅನಾಹುತ...
ಅಪಘಾತದಲ್ಲಿ 10 ಜನರಿಗೆ ಗಾಯಗಳಾಗಿವೆ. ಬೆಳಗಿನ ಜಾವ ಈ ಘಟನೆ ನಡೆದಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಯಾಳುಗಳನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾಹಿತಿ ತಿಳಿದ ಜಿಲ್ಲೆಯ ಗ್ರಾಮಾಂತರ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Last Updated : Feb 19, 2020, 10:39 AM IST