ಚಿತ್ರದುರ್ಗ :ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಪೇದೆವೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚೀರನಹಳ್ಳಿ ಗೇಟ್ ಬಳಿ ನಡೆದಿದೆ.
ಅಪರಿಚಿತ ವಾಹನ ಡಿಕ್ಕಿ: ಹೊಳಲ್ಕೆರೆ ಬಳಿ ಪೊಲೀಸ್ ಪೇದೆ ಸ್ಥಳದಲ್ಲೇ ಸಾವು - undefined
ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಪೊಲೀಸ್ ಪೇದೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿನ್ನೆ ತಡರಾತ್ರಿ ಹೊಳಲ್ಕೆರೆ ತಾಲೂಕಿನ ಚೀರನಹಳ್ಳಿ ಬಳಿ ಘಟನೆ ನಡೆದಿದೆ.
ಮೃತ ದೇಹ
ಕೊಡಗವಳ್ಳಿ ನಿವಾಸಿ ಕೆ.ಕೆ. ಆನಂದ್(33) ಮೃತ ಪೊಲೀಸ್ ಪೇದೆ ಎಂದು ಗುರುತಿಸಲಾಗಿದೆ. ನಿನ್ನೆ ತಡರಾತ್ರಿ ಸಂಭವಿಸಿರುವ ಅಪಘಾತದಲ್ಲಿ ಹೊಳಲ್ಕೆರೆ ಪೊಲೀಸ್ ಠಾಣೆ ಪೇದೆ ಆನಂದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಸಂಬಂಧ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.