ಕರ್ನಾಟಕ

karnataka

ETV Bharat / state

ಭೀಕರ ಅಪಘಾತ : ಒಂದೇ ಕುಟುಂಬದ ಮೂವರ ದುರ್ಮರಣ - ಭೀಕರ ಅಪಘಾತ ಒಂದೇ ಕುಟುಂಬದ ಮೂವರ ದುರ್ಮರಣ

ಹಿರಿಯೂರು ತಾಲ್ಲೂಕಿನ ಹರ್ತಿಕೋಟೆ ಮತ್ತು ಬಾಲೇನಹಳ್ಳಿ ಗ್ರಾಮಗಳ ಸಮೀಪದ ರಾಷ್ಟ್ರೀಯ ಹೆದ್ದಾರಿ 151ಎ ರಲ್ಲಿ ಲಾರಿಗೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.

Accident
ಅಪಘಾತ

By

Published : Oct 10, 2020, 8:32 PM IST

ಚಿತ್ರದುರ್ಗ:ಲಾರಿಗೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ, ಓರ್ವ ಮಹಿಳೆಗೆ ಗಂಭೀರ ಗಾಯಗಳಾಗಿರುವ ಘಟನೆ ಹಿರಿಯೂರು ತಾಲ್ಲೂಕಿನ ಹರ್ತಿಕೋಟೆ ಮತ್ತು ಬಾಲೇನಹಳ್ಳಿ ಗ್ರಾಮಗಳ ಸಮೀಪದ ರಾಷ್ಟ್ರೀಯ ಹೆದ್ದಾರಿ 151ಎ ರಲ್ಲಿ ನಡೆದಿದೆ.

ಚಳ್ಳಕೆರೆ ತಾಲೂಕಿನ ಕರಿಕೆರೆ ಗ್ರಾಮದ ನಿವಾಸಿಗಳಾದ ಕಾರು ಚಾಲಕ ಪ್ರಭಾಕರ್ (38), ವೇಣು (20) ಹಾಗೂ ನಾಗವೇಣಿ( 45) ಮೂವರು ಮೃತರೆಂದು ಗುರುತಿಸಲಾಗಿದೆ.

ಇನ್ನು ಅಪಘಾತದಲ್ಲಿ ಗಾಯಗೊಂಡಿರುವ ವಿಶಾಲಾಕ್ಷಮ್ಮ ಎಂಬುವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಳ್ಳಕೆರೆಯಿಂದ ಬೆಂಗಳೂರು ಮಾರ್ಗವಾಗಿ ತೆರಳುತ್ತಿದ್ದ ಕಾರು, ಹಿರಿಯೂರು ಕಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.

ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ABOUT THE AUTHOR

...view details