ಚಿತ್ರದುರ್ಗ: ನಿಂತಿದ್ದ ಲಾರಿಗೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ನಿಂತಿದ್ದ ಲಾರಿಗೆ ಟಾಟಾ ಏಸ್ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು - undefined
ಚಳ್ಳಕೆರೆ ಗಾಂಧೀನಗರ ನಿವಾಸಿ ತಿಪ್ಪೇಸ್ವಾಮಿ (27) ಹಾಗೂ ಮಲ್ಲಿಕಾರ್ಜುನ್ (25) ಮೃತ ದುರ್ದೈವಿಗಳೆಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಳ್ಳಕೆರೆ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ನಗರದ ವಿರಶೈವ ಕಲ್ಯಾಣ ಮಂಟಪ ಬಳಿಯ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಚಳ್ಳಕೆರೆ ಗಾಂಧೀನಗರ ನಿವಾಸಿ ತಿಪ್ಪೇಸ್ವಾಮಿ (27) ಹಾಗೂ ಮಲ್ಲಿಕಾರ್ಜುನ್ (25) ಮೃತರು ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ಬಳಿಕ ರಸ್ತೆ ಸಂಚಾರ ಸುಗಮಗೊಳಿಸಲು ಪೊಲೀಸರು ಕೆಲಹೊತ್ತು ಹರಸಾಹಸ ಪಟ್ಟ ಘಟನೆ ಸಹ ನಡೆಯಿತು.