ಚಿತ್ರದುರ್ಗ:ದೇಶಾದಂತ್ಯ ನಡೆಯುತ್ತಿರುವ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಯ ಕಾವು ಚಿತ್ರದುರ್ಗದಲ್ಲೂ ಏರಿದೆ.
ರಸ್ತೆಯಲ್ಲಿ ಕುಳಿತು ಧರಣಿ ಕೈಗೊಂಡ ಕಾರ್ಮಿಕರು ಎಐಟಿಯುಸಿ, ಸಿಐಟಿಯು ಹಾಗೂ ಸಿಪಿಐ ಸಂಘಟನೆಗಳ ನೇತೃತ್ವದಲ್ಲಿ ನೂರಾರು ಕಾರ್ಮಿಕರ ಸಹಯೋಗದಲ್ಲಿ ನಡೆದ ಪ್ರತಿಭಟನೆಯಲ್ಲಿ ರಸ್ತೆಯಲ್ಲಿ ಕುಳಿತು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಲಾಯಿತು. ಕೇಂದ್ರ ಸರ್ಕಾರ ನೇತೃತ್ವದ ಸಂಸ್ಥೆಗಳನ್ನು ಖಾಸಗಿ ಸಹಭಾಗಿತ್ವಕ್ಕೆ ನೀಡುತ್ತಿರುವ ಕೇಂದ್ರ ಸರ್ಕಾರದ ನೀತಿಯನ್ನೂ ಕೂಡ ಖಂಡಿಸಲಾಯಿತು.
ಇದನ್ನೂ ಓದಿ: ಶಿವಮೊಗ್ಗ: ಕಾರ್ಮಿಕ ವಿರೋಧಿ ಕಾಯ್ದೆ ಪ್ರತಿಭಟನೆಗೆ ವ್ಯಾಪಕ ಬೆಂಬಲ
ಚಿತ್ರದುರ್ಗ ನಗರದ ಒನಕೆ ಓಬವ್ವ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತ ಮುಖಂಡರು ಕೂಡ ಭಾಗಿಯಾಗಿ ರೈತ ವಿರೋಧಿ ಕಾಯ್ದೆಗಳನ್ನು ತಕ್ಷಣ ರದ್ದುಗೊಳಿಸುವಂತೆ ಒತ್ತಾಯಿಸಿದರು. ಕನಿಷ್ಠ ವೇತನ, ಕಾರ್ಮಿಕರಿಗೆ ಭವಿಷ್ಯ ನಿಧಿ ಶಾಸನ ರೂಪಿಸಲು, ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಯಿತು. ಇನ್ನು ಕಾರ್ಮಿಕರ ವಿರೋಧಿ ನೀತಿಯನ್ನು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಕೈ ಬಿಡಬೇಕು ಎಂದು ಮನವಿ ಮಾಡಲಾಯಿತು.