ಚಿತ್ರದುರ್ಗ:ಮುಂಬೈನಲ್ಲಿಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ರಾಜಗೃಹ ಧ್ವಂಸಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು.
ಅಂಬೇಡ್ಕರ್ ರಾಜಗೃಹ ಧ್ವಂಸ: ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ - ಪ್ರತಿಭಟನಾ ಸುದ್ದಿ
ಮುಂಬೈನ ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ರಾಜಗೃಹವನ್ನು ಧ್ವಂಸಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಚಿತ್ರದುರ್ಗ ನಗರದ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು.
ಅಂಬೇಡ್ಕರ್ ಸಂಘದ ಸದಸ್ಯರ ಪ್ರತಿಭಟನೆ
ಅಂಬೇಡ್ಕರ್ ವೃತ್ತದಿಂದ ಡಿಸಿ ವೃತ್ತದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ರಾಜಗೃಹ ಮುಂದೆ ಇರುವ ಹೂವಿನ ಕುಂಡಲಗಳನ್ನು ಯುವಕ ಹಾನಿ ಮಾಡುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಆದರೂ ಆರೋಪಿಯನ್ನು ಬಂಧಿಸಿಲ್ಲ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.